ಡಿಪೋ ಮ್ಯಾನೇಜರ್ ಕಿರುಕುಳ: ಡಿಸೇಲ್ ಸುರಿದುಕೊಂಡು KKSRTC ಬಸ್ ಚಾಲಕ ಆತ್ಮಹತ್ಯೆ ಯತ್ನ
ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತ ಕೆಕೆಎಸ್ಆರ್ಟಿಸಿ ಚಾಲಕ ಕಂ ನಿರ್ವಾಹಕರೊಬ್ಬರು ಡಿಸೇಲ್ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನಿಸಿದ ಘಟನೆ ಕಲಬುರಗಿ ನಗರದ ಡಿಪೋ ನಂಬರ್ 2 ರಲ್ಲಿ ನಡೆದಿದೆ.

ಕಲಬುರಗಿ: ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತ ಕೆಕೆಎಸ್ಆರ್ಟಿಸಿ ಚಾಲಕ ಕಂ ನಿರ್ವಾಹಕರೊಬ್ಬರು ಡಿಸೇಲ್ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನಿಸಿದ ಘಟನೆ ಕಲಬುರಗಿ ನಗರದ ಡಿಪೋ ನಂಬರ್ 2 ರಲ್ಲಿ ನಡೆದಿದೆ.
ಡಿಪೋ ಮ್ಯಾನೇಜರ್ ತನಗೆ ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ. ಸರಿಯಾಗಿ ಡ್ಯೂಟಿ ನೀಡುತ್ತಿಲ್ಲ. ಹೆಚ್ಚುವರಿ ಕೆಲಸ ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ಚಾಲಕ ಕಂ ನಿರ್ವಾಹಕರಾಗಿ ಕೆಲಸ ಮಾಡುತ್ತಿರುವ ಬೀರಣ್ಣ ಆರೋಪಿಸಿದ್ದಾರೆ.
ಅಲ್ಲದೆ, ಕಿರುಕುಳಕ್ಕೆ ಬೇಸತ್ತು ಡಿಪೋದಲ್ಲಿಯೇ ಡಿಸೇಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಡಿಸೇಲ್ ಸುರಿದುಕೊಳ್ಳುತ್ತಿದ್ದಂತೆ ಎಚ್ಚೆತ್ತ ಸಿಬ್ಬಂದಿ, ಅನಾಹುತವನ್ನು ತಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


