ತುಮಕೂರು ವಿವಿಗೆ ಅಜಿತ್ ಹನುಮಕ್ಕನವರ್ ಆಹ್ವಾನ: ಪ್ರಗತಿಪರ ಸಂಘಟನೆಗಳಿಂದ ಜುಲೈ 20ರಂದು ಪ್ರತಿಭಟನೆ
ವಿಶ್ವವಿದ್ಯಾನಿಲಯದಲ್ಲಿ ಹಮ್ಮಿಕೊಂಡಿರುವ ಮಾಧ್ಯಮ ಹಬ್ಬಕ್ಕೆ ಪತ್ರಕರ್ತ ಅಜಿತ್ ಹನುಮಕ್ಕನವರ್ ಅವರಿಗೆ ಆಹ್ನಾಮ ನೀಡಿರುವುದಕ್ಕೆ ಜಿಲ್ಲೆಯಲ್ಲಿ ಪ್ರಗತಿಪರ ಸಂಘಟನೆಗಳು ಖಂಡಿಸಿವೆ,

ತುಮಕೂರು: ವಿಶ್ವವಿದ್ಯಾನಿಲಯದಲ್ಲಿ ಹಮ್ಮಿಕೊಂಡಿರುವ ಮಾಧ್ಯಮ ಹಬ್ಬಕ್ಕೆ ಪತ್ರಕರ್ತ ಅಜಿತ್ ಹನುಮಕ್ಕನವರ್ ಅವರಿಗೆ ಆಹ್ವಾನ ನೀಡಿರುವುದಕ್ಕೆ ಜಿಲ್ಲೆಯಲ್ಲಿ ಪ್ರಗತಿಪರ ಸಂಘಟನೆಗಳು, ಪ್ರಗತಿಪರ ವಿದ್ಯಾರ್ಥಿ-ಯುವಜನರ ವೇದಿಕೆ ಹಾಗೂ ವಿವಿ ಹಳೆಯ ವಿದ್ಯಾರ್ಥಿ ವೇದಿಕೆಗಳಿಂದ ವ್ಯಾಪಕ ಖಂಡನೆ ಮತ್ತು ವಿರೋಧ ವ್ಯಕ್ತವಾಗಿದೆ.
ತುಮಕೂರು ವಿಶ್ವವಿದ್ಯಾಲಯ ಜಾತ್ಯತೀತ ಪರಂಪರೆಯನ್ನು ಹೊಂದಿದೆ. ಸಾಮರಸ್ಯತೆಗೆ ಹೆಸರಾಗಿದೆ. ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತಿದೆ. ಇಂತಹ ಮಹತ್ವದ ಪರಂಪರೆಯನ್ನು ಸಾರುತ್ತಿರುವ ವಿಶ್ವವಿದ್ಯಾಲಯದಲ್ಲಿ ಮತೀಯ ಭಾವನೆಗಳನ್ನು ಕೆರಳಿಸುವ, ವಿಛಿದ್ರಕಾರಿ ಸಂಗತಿಗಳನ್ನು ಪ್ರತಿಪಾದಿಸುವ ಪತ್ರಕರ್ತ ಅಜಿತ್ ಹನುಮಕ್ಕನವರ್ ಅವರನ್ನು ಯಾವುದೇ ಕಾರಣಕ್ಕೂ ವಿವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕರೆಸುವುದು ಬೇಡ. ಒಂದೊಮ್ಮೆ ಅವರನ್ನು ಕರೆಸಿದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ವಿವಿಧ ಸಂಘಟಗಳನ್ನು ಎಚ್ಚರಿಕೆ ನೀಡಿವೆ.
ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ವೆಂಕಟೇಶ್ವರಲು ಅವರನ್ನು ಭೇಟಿ ಮಾಡಿದ ಪ್ರಗತಿಪರ ವಿದ್ಯಾರ್ಥಿ-ಯುವಜನರ ಸಂಘಟನೆಗಳ ಒಕ್ಕೂಟ, ಹಳೆಯ ವಿದ್ಯಾರ್ಥಿಗಳ ವೇದಿಕೆ ಮತ್ತು ಜಿಲ್ಲಾ ಸಮಾನ ಮನಸ್ಕರ ವೇದಿಕೆಯ ಪದಾಧಿಕಾರಿಗಳು ಸಮಾಜದಲ್ಲಿ ದ್ವೇಷ ಹರಡುವ ಪತ್ರಕರ್ತ ಅಜಿತ್ ಹನುಮಕ್ಕನವರ್ ಅವರನ್ನು ಕರೆಸುವುದನ್ನು ನಿಲ್ಲಿಸಬೇಕು ಸಂಘಟನೆಗಳು ಒತ್ತಾಯಿಸಿವೆ.
ತುಮಕೂರು ವಿವಿಯಲ್ಲಿ ರಾಜ್ಯಮಟ್ಟದ ಮಾಧ್ಯಮ ಹಬ್ಬ ನಡೆಯುತ್ತಿದೆ.ಇಂತಹ ಹಬ್ಬಕ್ಕೆ ಅಜಿತ್ ಹನುಮಕ್ಕನವರ್ ಅವರಿಂದ ಕೋಮುವಾದಿ ಭಾಷಣ ಮಾಡಿಸಲು ಹೊರಟಿರುವ ವಿವಿಯ ಕ್ರಮ ಪ್ರಶ್ನಾರ್ಹವಾಗಿದೆ. ಅಲ್ಲದೆ ವಿವಿಯ ಪರಂಪರೆಯನ್ನು ನಾಶ ಮಾಡಲು ಹುನ್ನಾರ ನಡೆಸಲಾಗುತ್ತಿದೆ. ಶಾಂತಿ-ಸುವ್ಯವಸ್ಥೆಯನ್ನು ಹದಗೆಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


