ನಾಲ್ಕು ತಿದ್ದುಪಡಿ ಮಸೂದೆಗಳು ವಿಧಾನಸಭೆಯಲ್ಲಿ ಮಂಡನೆ
ನೌಕರರ ಸಾಮಾನ್ಯ ಕೇಡರ್ ನ್ನು ರೂಪಿಸಲು ರಾಜ್ಯ ಸರ್ಕಾರ ಕರ್ನಾಟಕ ಸಹಕಾರ ಸೊಸೈಟಿ (ತಿದ್ದುಪಡಿ) ಮಸೂದೆ, 2023 ನ್ನು ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದೆ.

ಬೆಂಗಳೂರು: ನೌಕರರ ಸಾಮಾನ್ಯ ಕೇಡರ್ ನ್ನು ರೂಪಿಸಲು ರಾಜ್ಯ ಸರ್ಕಾರ ಕರ್ನಾಟಕ ಸಹಕಾರ ಸೊಸೈಟಿ (ತಿದ್ದುಪಡಿ) ಮಸೂದೆ, 2023 ನ್ನು ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದೆ.
ಪ್ರಾಥಮಿಕ ಕೃಷಿ ಸೊಸೈಟಿಗಳಲ್ಲಿ ಅಕ್ರಮಗಳನ್ನು ನಿಯಂತ್ರಿಸುವ ಹಾಗೂ ಆಡಳಿತ ಮಂಡಳಿಯ ಒತ್ತಡದಿಂದ ಮುಕ್ತವಾಗಿ ಕಾರ್ಯನಿರ್ವಹಿಸುವುದಕ್ಕೆ ಈ ತಿದ್ದುಪಡಿ ಮಸೂದೆ ಅನುವು ಮಾಡಿಕೊಡಲಿದೆ.
ಪ್ರಾಥಮಿಕ ಕೃಷಿ ಸಹಕಾರ ಸೊಸೈಟಿಗಳಲ್ಲಿ ಹಣದ ಅಕ್ರಮಗಳ ಪ್ರಕರಣಗಳನ್ನು ತಡೆಗಟ್ಟಲು ಸಾಮಾನ್ಯ ಕೇಡರ್ ರಚನೆ ಅಗತ್ಯವಿದೆ ಎಂದು ಮಸೂದೆಯ ಉದ್ದೇಶಗಳಲ್ಲಿ ಹೇಳಲಾಗಿದೆ.
ಪ್ರಸ್ತಾವಿತ ತಿದ್ದುಪಡಿಯು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು/ಕಾರ್ಯದರ್ಶಿಗಳಿಗೆ ರೈತರಿಗೆ ಮತ್ತು ಹಾಲು ಉತ್ಪಾದಕರಿಗೆ ಉತ್ತಮ ಗುಣಮಟ್ಟದ ಸೇವೆಯನ್ನು ಒದಗಿಸಲು ಸಹಾಯ ಮಾಡುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಇದೇ ವೇಳೆ ಸರ್ಕಾರ ಕೋಡ್ ಆಫ್ ಸಿವಿಲ್ ಪ್ರೊಸೀಜರ್ (ತಿದ್ದುಪಡಿ) ಮಸೂದೆಯನ್ನು ಮಂಡಿಸಿದ್ದು, ಇದು, ನ್ಯಾಯಾಲಯಗಳಲ್ಲಿ ಸುದೀರ್ಘ ವ್ಯಾಜ್ಯಗಳನ್ನು ಎದುರಿಸಲು ಸಾಧ್ಯವಿಲ್ಲದ ಸಣ್ಣ ಮತ್ತು ಅತಿ ಸಣ್ಣ ರೈತರು ಮತ್ತು ಆರ್ಥಿಕವಾಗಿ ದುರ್ಬಲ ವರ್ಗದ ಜನರಿಗೆ ಸಹಾಯ ಮಾಡಲು, ಪ್ರಕರಣಗಳ ತ್ವರಿತ ವಿಲೇವಾರಿಗೆ ಸಹಕಾರಿಯಾಗಲಿದೆ.
ಇನ್ನು ಮಂಗಳವಾರ ಕೆಳಮನೆಯಲ್ಲಿ ಮಂಡಿಸಲಾದ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ಮಸೂದೆ, 2023, ಸ್ವಯಂ ಘೋಷಣೆಯ ಮೂಲಕ ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕಾಗಿ ಬೇರೆಡೆಗೆ ತಿರುಗಿಸುವ ಗುರಿಯನ್ನು ಹೊಂದಿದೆ.
ಸರ್ಕಾರ ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ನೋಂದಣಿ ಅಧಿಕಾರಿಯು ನಕಲಿ ದಾಖಲೆಗಳು ಮತ್ತು ಕಾನೂನಿನಿಂದ ನಿಷೇಧಿಸಲಾದ ಇತರ ದಾಖಲೆಗಳನ್ನು ನೋಂದಾಯಿಸಲು ನಿರಾಕರಿಸಲು ಅನುವು ಮಾಡಿಕೊಡುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


