ಖಾಸಗಿ ಶಾಲೆಯಲ್ಲಿ ಕನ್ನಡ ಬೋಧನೆ ಕೈಬಿಡುವಂತೆ ಪೋಷಕರ ಮನವಿ: ಕನ್ನಡ ಸಂಘಟನೆಗಳ ಆಕ್ರೋಶ
ನಗರದ ಚಾಲುಕ್ಯ ವೃತ್ತದಲ್ಲಿರುವ ಸೋಫಿಯಾ ಶಾಲೆಯಲ್ಲಿ ಕನ್ನಡ ಬೋಧನೆ ಕೈಬಿಡುವ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಕನ್ನಡ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿವೆ.

ಬೆಂಗಳೂರು: ನಗರದ ಚಾಲುಕ್ಯ ವೃತ್ತದಲ್ಲಿರುವ ಸೋಫಿಯಾ ಶಾಲೆಯಲ್ಲಿ ಕನ್ನಡ ಬೋಧನೆ ಕೈಬಿಡುವ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಕನ್ನಡ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿವೆ.
ನಗರದ ಚಾಲುಕ್ಯ ವೃತ್ತದ ಬಳಿಯ ಖಾಸಗಿ ಶಾಲೆಯಲ್ಲಿ ಓದುತ್ತಿರುವ 50 ಕ್ಕೂ ಹೆಚ್ಚು ಮಕ್ಕಳ ಪೋಷಕರು ಪಠ್ಯಕ್ರಮದಿಂದ ಕನ್ನಡ ಭಾಷೆ ಕೈಬಿಡುವಂತೆ ಶಾಲೆಯನ್ನು ಸಂಪರ್ಕಿಸಿ ಮನವಿ ಸಲ್ಲಿಸಿದ್ದಾರೆ.
ಪೋಷಕರ ಬೇಡಿಕೆ ಹಿನ್ನೆಲೆಯಲ್ಲಿ ಖಾಸಗಿ ಶಾಲೆಯು ಕರ್ನಾಟಕ ಶಿಕ್ಷಣ ಇಲಾಖೆಯನ್ನು ಸಂಪರ್ಕಿಸಲು ಚಿಂತನೆ ನಡೆಸಿದೆ. ಜೊತೆಗೆ ಈ ಬಗ್ಗೆ ಶಾಲಾ ಆಡಳಿತಕ್ಕೆ ಪತ್ರ ಬರೆಯುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ.
ಪಠ್ಯಕ್ರಮದಲ್ಲಿ ಕನ್ನಡದ ಬದಲು ಇಂಗ್ಲಿಷ್ ಸೇರಿಸಿದರೆ ಮಕ್ಕಳು ಉನ್ನತ ವ್ಯಾಸಂಗಕ್ಕೆ ಆಯ್ಕೆಯಾದಾಗ ಅನುಕೂಲವಾಗುತ್ತದೆ ಎಂದು ಪೋಷಕರು ವಾದ ಮಂಡಿಸಿದ್ದಾರೆ.
ಇದನ್ನೂ ಓದಿ: ಕನ್ನಡಿಗರ ಸ್ವಾಭಿಮಾನಕ್ಕೆ ಕಾಂಗ್ರೆಸ್ ಘಟಶ್ರಾದ್ಧ: ಐಎಎಸ್ ಜೀತ ಪದ್ಧತಿ; ಅಪಾಯಕಾರಿ ಹಸ್ತವಾಸಿಯೇ ಕೈ ಪಕ್ಷದ ಆಸ್ತಿ!
ಈ ಬೆಳವಣಿಗೆಗಳ ಕುರಿತು ಕನ್ನಡ ಪರ ಸಂಘಟನೆಗಳ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ಕನ್ನಡವನ್ನು ವಿರೋಧಿಸುತ್ತಿರುವ ಶಾಲೆ ಮತ್ತು ಪೋಷಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತಿದ್ದಾರೆ.
ಕನ್ನಡ ಬೇಡವಾದರೆ ಕರ್ನಾಟಕದಿಂದ ಹೊರ ಹೋಗಲಿ. ಶಾಲಾ ಆಡಳಿತ ಮಂಡಳಿ ಮತ್ತು ಸರ್ಕಾರ ಈ ರೀತಿಯ ಮನವಿಯನ್ನು ತಿರಸ್ಕರಿಸಬೇಕು' ಎಂದು ಹೇಳಿದ್ದಾರೆ.
ಏತನ್ಮಧ್ಯೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಡಿಎಸ್‌ಇಎಲ್) ಅಧಿಕಾರಿಗಳು, ಆರೋಪಘಲು ಕೇಳಿ ಬಂದಿವೆ. ಆದರೆ, ಶಾಲೆಯ ಪಠ್ಯಕ್ರಮದಿಂದ ಕನ್ನಡವನ್ನು ತೆಗೆದುಹಾಕುವ ಬಗ್ಗೆ ಯಾವುದೇ ಔಪಚಾರಿಕ ದೂರುಗಳು ಇಲಾಖೆಗೆ ನೀಡಿಲಾಗಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


