ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇಧ: ರಾಜ್ಯ ಸರ್ಕಾರ ಆದೇಶ
ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಡಿ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಬಳಕೆ ಮೇಲೆ ನಿಷೇಧ ಹೇರುವಂತೆ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಡಿ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಬಳಕೆ ಮೇಲೆ ನಿಷೇಧ ಹೇರುವಂತೆ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.
ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗಿರುವ ಕಾರಣ ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಬಳಕೆ ಶಬ್ದಗಳಿಂದ ದೇವಾಲಯದ ಸಿಬ್ಬಂದಿಗಳಿಗೂ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ತೊಂದರೆಯಾಗುತ್ತಿರುವ ಹಿನ್ನೆಲೆ ಮೊಬೈಲ್ ಬಳಕೆ ನಿಷೇಧಿಸಲಾಗಿದ್ದು, ಭಕ್ತರು ದೇವಾಲಯಗಳ ಸೂಚನಾ ಫಲಕಗಳಲ್ಲಿ ಉಲ್ಲೇಖಿಸಿರುವ ಸೂಚನೆಗಳನ್ನು ಪಾಲಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಮನವಿ ಮಾಡಿದೆ.
ಈ ಬಗ್ಗೆ ಸೂಚನಾ ಪತ್ರದಲ್ಲಿ ಮಾಹಿತಿ ನೀಡುವಂತೆ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


