ವಿಧ್ವಂಸಕ ಕೃತ್ಯಕ್ಕೆ ಸಂಚು: ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ
ಕರ್ನಾಟಕ ರಾಜ್ಯದಲ್ಲಿ ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಐವರು ಶಂಕಿತ ಭಯೋತ್ಪಾದಕರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಐವರು ಶಂಕಿತ ಭಯೋತ್ಪಾದಕರನ್ನು ಸಿಸಿಬಿ ಪೊಲೀಸರು ಬುಧವಾರ ಬೆಳಗ್ಗೆ ಬಂಧಿಸಿದ್ದಾರೆ.
ಬಂಧಿತರನ್ನು ಸಯ್ಯದ್ ಸುಹೇಲ್, ಉಮರ್, ಜುನೇದ್ ಮುದಾಶೀರ್, ಜಾಹಿದ್ ಬಂಧಿತ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ.
2017ರ ಅಕ್ಟೋಬರ್ನಲ್ಲಿ ಬೆಂಗಳೂರಿನ ಆರ್.ಟಿ.ನಗರದಲ್ಲಿ ನಡೆದಿದ್ದ ಮೂವರ ಕಿಡ್ನ್ಯಾಪ್, ಓರ್ವನ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಹಲವು ಆರೋಪಿಗಳು, ಪರಪ್ಪನ ಅಗ್ರಹಾರ ಜೈಲಿನಿಂದ ಉಗ್ರರ ಜೊತೆಗೆ ಸಂಪರ್ಕ ಹೊಂದಿದ್ದರು ಎನ್ನಲಾಗಿದ್ದು, ಈ ಬಗ್ಗೆ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಸಿಸಿಬಿಯು ನಗರದ ವಿವಿಧ ಪ್ರದೇಶಗಳಿಂದ ಐವರು ಶಂಕಿತ ಭಯೋತ್ಪಾದಕರನ್ನು ಬಂಧಿಸಿ ಅವರಿಂದ ಅನೇಕ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


