ರಾಹುಲ್ ಗಾಂಧಿ ಕುರಿತ ವೀಡಿಯೋ: ಅಮಿತ್ ಮಾಲವೀಯ ವಿರುದ್ಧದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಅವಹೇಳನಕಾರಿ ವೀಡಿಯೋ ಹಂಚಿಕೊಂಡಿದ್ದ ಅಮಿತ್ ಮಾಲವೀಯ ವಿರುದ್ಧದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ.

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಅವಹೇಳನಕಾರಿ ವೀಡಿಯೋ ಹಂಚಿಕೊಂಡಿದ್ದ ಅಮಿತ್ ಮಾಲವೀಯ ವಿರುದ್ಧದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ.
ಅಮಿತ್ ಮಾಲವಿಯ ಬಿಜೆಪಿಯ ಸಾಮಾಜಿಕ ಜಾಲತಾಣ ವಿಭಾಗದ ರಾಷ್ಟ್ರೀಯ ಮುಖ್ಯಸ್ಥರಾಗಿದ್ದಾರೆ. ತಮ್ಮ ವಿರುದ್ಧ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರಿ ಹೈಕೋರ್ಟ್ ಗೆ ಮಾಲವೀಯ ಮನವಿ ಸಲ್ಲಿಸಿದ್ದರು.
ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಪೀಠ ತನಿಖೆಗೆ ಮಧ್ಯಂತರ ತಡೆ ನೀಡಿದ್ದು, ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ಪ್ರಕರಣವನ್ನು ಮುಂದೂಡಲಾಗಿದೆ. ವಿಚಾರಣೆ ವೇಳೆ ಸಂಸದ ತೇಜಸ್ವಿ ಸೂರ್ಯ ಅರ್ಜಿದಾರರ ಪರವಾಗಿ ಹಾಜರಾಗಿ, ಸೆಕ್ಷನ್ 505 (2) ಹಾಗೂ 153A ಅಡಿಯಲ್ಲಿ ಶಿಕ್ಷಿಸುವಂತಹ ಯಾವುದೇ ಅಪರಾಧಗಳೂ ಆ ವೀಡಿಯೋದಲ್ಲಿಲ್ಲ ಎಂದು ವಾದಿಸಿದರು.
"ಅರ್ಜಿದಾರರ ಕ್ರಿಯೆ, ಆಪಾದಿಸಿದ ಅಪರಾಧಕ್ಕೆ ಹೇಗೆ ಕಾರಣವಾಗಿವೆ ಎಂಬುದನ್ನು ತೋರಿಸಲು ದೂರಿನಲ್ಲಿ ಯಾವುದೇ ಅಂಶಗಳು ಇಲ್ಲ. ದೋಷಾರೋಪಣೆ ಮಾಡಲಾದ ಎಫ್‌ಐಆರ್ ಅನ್ನು ಈ ಆಧಾರದ ಮೇಲೆ ರದ್ದುಗೊಳಿಸಬಹುದಾಗಿದೆ,” ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


