ಬಳ್ಳಾರಿ: ಮಗನ ಹುಟ್ಟುಹಬ್ಬದ ದಿನವೇ ಮಾರಕಾಸ್ತ್ರಗಳಿಂದ ಕೊಚ್ಚಿ ಮೊಹಬೂಬ್ ಬಾಷಾ ಬರ್ಬರ ಹತ್ಯೆ
ಬಳ್ಳಾರಿ ಹೊರವಲಯದ ಗುಗ್ಗರಹಟ್ಟಿಯ ಕೃಷ್ಣ ಕಾಲೋನಿಯಲ್ಲಿ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಬಳ್ಳಾರಿ: ಬಳ್ಳಾರಿ ಹೊರವಲಯದ ಗುಗ್ಗರಹಟ್ಟಿಯ ಕೃಷ್ಣ ಕಾಲೋನಿಯಲ್ಲಿ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಮೃತ ವ್ಯಕ್ತಿಯನ್ನು 40 ವರ್ಷದ ಮೆಹಬೂಬ್ ಬಾಷಾ ಎಂದು ಗುರುತಿಸಲಾಗಿದೆ. ನಿನ್ನೆ ಮಗು ಹುಟ್ಟುಹಬ್ಬವಿತ್ತು. ಹೀಗಾಗಿ ಕೇಕ್ ತಂದು ಕತ್ತರಿಸಲು ಸಿದ್ಧತೆಗಳು ಮಾಡಿಕೊಳ್ಳುತ್ತಿದ್ದಾಗ ದುಷ್ಕರ್ಮಿಗಳು ಮನೆಯ ಬಾಗಿಲು ಬಡಿದಿದ್ದಾರೆ.
ಈ ವೇಳೆ ಮನೆಯಿಂದ ಹೊರಬಂದ ಮೊಹಬೂಬ್ ಬಾಷಾನ ಎದೆಗೆ ಚಾಕು ಇರಿದು ನಂತರ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದ್ದಾರೆ.
ಮೊಹಬೂಬ್ ಬಾಷಾ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದು ಹಣಕಾಸು ವಿಚಾರವಾಗಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಧಿತರನ್ನು ಕೋಳಿ ಅನ್ವರ್, ಅಲ್ತಾಫ್, ಸಿರಾಜ್ ಎಂಬುವರನ್ನು ಪೊಲೀಸರು ಬಂಧಿಸಿದ್ದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


