ಕನ್ನಡ ಬೋಧನೆ ಸ್ಥಗಿತಗೊಳಿಸಲು ಮುಂದಾದ ಶಾಲೆಗೆ ನೋಟಿಸ್ ಜಾರಿ
ಕನ್ನಡ ಬೋಧನೆ ಸ್ಥಗಿತಗೊಳಿಸಲು ಮುಂದಾದ ನಗರದ ಖಾಸಗಿ ಶಾಲೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬುಧವಾರ ನೋಟಿಸ್ ಜಾರಿ ಮಾಡಿದ್ದು, ಮೂರು ದಿನಗಳೊಳಗಾಗಿ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದೆ.

ಬೆಂಗಳೂರು: ಕನ್ನಡ ಬೋಧನೆ ಸ್ಥಗಿತಗೊಳಿಸಲು ಮುಂದಾದ ನಗರದ ಖಾಸಗಿ ಶಾಲೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬುಧವಾರ ನೋಟಿಸ್ ಜಾರಿ ಮಾಡಿದ್ದು, ಮೂರು ದಿನಗಳೊಳಗಾಗಿ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದೆ.
ಕನ್ನಡ ಭಾಷಾ ಕಲಿಕೆ ಕಾಯಿದೆ-2015ರ ಪ್ರಕಾರ ಶಾಲೆಗಳು ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಆದರೆ, ನಗರದ ಖಾಸಗಿ ಶಾಲೆಯೊಂದು 8ನೇ ತರಗತಿಯಿಂದ ಕನ್ನಡ ಕಲಿಕೆಯನ್ನು ಸ್ಥಗಿತಗೊಳಿಸಲು ಮುಂದಾಗಿತ್ತು.
ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರಿವು, ಕೂಡಲೇ ಸ್ಪಷ್ಟನೆ ನೀಡುವಂತೆ ಶಾಲೆಗೆ ನೋಟಿಸ್ ಜಾರಿ ಮಾಡಿದೆ.
ಕಾನೂನಿನ ಪ್ರಕಾರ ಕನ್ನಡ ಕಲಿಕೆಗೆ ಅವಕಾಶ ಕಲ್ಪಿಸದ ಖಾಸಗಿ ಶಾಲೆಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಕೋರಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಈ ಹಿಂದೆ ಪತ್ರ ಬರೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


