ರಾಜ್ಯ

'PSI ಹಗರಣ ನ್ಯಾಯಾಂಗ ತನಿಖೆಗೆ': ಕಾಂಗ್ರೆಸ್ ನಿಂದ ದ್ವೇಷದ ರಾಜಕಾರಣ ಎಂದ ಮಾಜಿ ಸಿಎಂ ಬೊಮ್ಮಾಯಿ

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪಿಎಸ್‌ಐ ನೇಮಕಾತಿ ಹಗರಣವನ್ನು ಸದ್ಯ ಕಾಂಗ್ರೆಸ್‌ ಸರ್ಕಾರವು ನ್ಯಾಯಾಂಗ ತನಿಖೆಗೆ ನೀಡಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬೊಮ್ಮಾಯಿ ಇದು ದ್ವೇಷದ ರಾಜಕಾರಣ ಎಂದು ಕಿಡಿಕಾರಿದ್ದಾರೆ.

'PSI ಹಗರಣ ನ್ಯಾಯಾಂಗ ತನಿಖೆಗೆ': ಕಾಂಗ್ರೆಸ್ ನಿಂದ ದ್ವೇಷದ ರಾಜಕಾರಣ ಎಂದ ಮಾಜಿ ಸಿಎಂ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Published On :

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪಿಎಸ್‌ಐ ನೇಮಕಾತಿ ಹಗರಣವನ್ನು ಸದ್ಯ ಕಾಂಗ್ರೆಸ್‌ ಸರ್ಕಾರವು ನ್ಯಾಯಾಂಗ ತನಿಖೆಗೆ ನೀಡಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬೊಮ್ಮಾಯಿ ಇದು ದ್ವೇಷದ ರಾಜಕಾರಣ ಎಂದು ಕಿಡಿಕಾರಿದ್ದಾರೆ.

ಶನಿವಾರ ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು,‌ 'ಕಾಂಗ್ರೆಸ್‌ ಸರ್ಕಾರದವರು ಪಿಎಸ್‌ಐ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿದ್ದಾರೆ. ಈ ದ್ವೇಷದ ರಾಜಕಾರಣ ಎಲ್ಲಿಗೆ ಹೋಗುತ್ತಿದೆ ಅನ್ನುವುದು ಗೊತ್ತಾಗುತ್ತಿಲ್ಲ. ಪಿಎಸ್‌ಐ ಹಗರಣ ನಾವೇ ಹೊರಗೆ ತಂದು ಸಿಐಡಿ ತನಿಖೆಗೆ ಆದೇಶ ಮಾಡಿದ್ದೇವು. ಪ್ರಕರಣದಲ್ಲಿ ಎಡಿಜಿಪಿ ಹುದ್ದೆಯ ಅಧಿಕಾರಿಯನ್ನು ಜೈಲಿಗೆ ಕಳುಹಿಸಿದ್ದೇವೆ.‌ ಈ ಹಗರಣದಲ್ಲಿ ಕಾಂಗ್ರೆಸ್‌ನವರೂ ಇದ್ದಾರೆ. ಪ್ರಕರಣದ ತನಿಖೆ ನಡೆದು ಕೊರ್ಟ್‌ನಲ್ಲಿದೆ‌.‌ ಈ ಸಂದರ್ಭ ಮತ್ತೆ ತನಿಖೆಗೆ ಆದೇಶ ಮಾಡಿರುವುದು ದ್ವೇಷ ರಾಜಕೀಯವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಅಧಿಕಾರಕ್ಕೆ ಬರುತ್ತಲೇ ದರ ಹೆಚ್ಚಳ
ಇದೇ ವೇಳೆ ದರ ಹೆಚ್ಚಳ ಕುರಿತು ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬೊಮ್ಮಾಯಿ, 'ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ವಿದ್ಯುತ್ ದರ ಹೆಚ್ಚಳ ಮಾಡಿದರು. ಎಲ್ಲ ತರಕಾರಿಗಳ ದರ ಹೆಚ್ಚಳ ಆಗಿದೆ. ಈಗ ಹಾಲಿನ ದರ ಹೆಚ್ಚಳ ಮಾಡಿದ್ದಾರೆ. ಆಗಸ್ಟ್ 1ರ ನಂತರ ಸೈಟ್, ಕಾರು, ಹೊಸ ಮನೆ ಖರೀದಿ ದರವೂ ಹೆಚ್ಚಳ‌ವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಜಿವನ ದುಸ್ತರವಾಗಿದೆ ಎಂದು ಆರೋಪಿಸಿದರು.

ಗೋಡ್ಸೆ ಹೇಳಿಕೆ: ಸಿದ್ದರಾಮಯ್ಯಗೆ ಬೊಮ್ಮಾಯಿ ತಿರುಗೇಟು
ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ ಕುರಿತು ಈ ಹಿಂದೆ ಟೀಕಿಸಿದ್ದ ಸಿದ್ದರಾಮಯ್ಯ ಹೇಳಿಕೆಗೆ ಇದೇ ವೇಳೆ ತಿರುಗೇಟು ನೀಡಿರುವ ಬೊಮ್ಮಾಯಿ, 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯವರು ಗೋಡ್ಸೆ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಲಿ ಅಂತ ಹೇಳಿದ್ದಾರೆ‌‌. ನಕಲಿ ಗಾಂಧಿಗಳ ಜಪ ಮಾಡುತ್ತಿರುವವರು ಕಾಂಗ್ರೆಸ್‌ನವರು.

ಗಾಂಧೀಜಿಯನ್ನು ಹೆಚ್ಚು ದುರುಪಯೋಗ ಮಾಡಿ ಕೊಂಡವರು ಕಾಂಗ್ರೆಸ್ ನವರು. ಗಾಂಧೀಜಿ ಸ್ವಾತಂತ್ರ್ಯದ ನಂತರ ಕಾಂಗ್ರೆಸ್‌ ಅನ್ನು ವಿಸರ್ಜಿಸಿ ಅಂತ ಹೇಳಿದ್ದರು. ಯಾಕೆಂದರೆ ಕಾಂಗ್ರೆಸ್‌ನವರಿಗೆ ದೇಶ ಆಳಲು ಬರುವುದಿಲ್ಲ ಅಂತ. ಆದರೆ, ಇವರು ಗಾಂಧೀಜಿ‌ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.