ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹ ಹಿನ್ನೆಲೆ; ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ; ಬದುಕುಳಿದ ಮಗಳು
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಅಮ್ಮ ಮತ್ತು ಒಬ್ಬ ಮಗಳು ಪ್ರಾಣ ಕಳೆದುಕೊಂಡಿದ್ದಾರೆ.

ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಅಮ್ಮ ಮತ್ತು ಒಬ್ಬ ಮಗಳು ಪ್ರಾಣ ಕಳೆದುಕೊಂಡಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಸೇಟ್ ದಿನ್ನೆ ಬಳಿ ಈ ಘಟನೆ ನಡೆದಿದ್ದು, 5 ವರ್ಷದ ಹೆಣ್ಣು ಮಗು ಶ್ರೀನಿಧಿ ಹಾಗೂ ತಾಯಿ ನಾಗಮ್ಮ (39) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಏಳು ವರ್ಷದ ಮಗು ಗಂಗೋತ್ರಿ ನೀರಿನಲ್ಲಿ ಮುಳುಗುವಾಗ ಭಯವಾಗಿ ಕೈಕಾಲು ಬಡಿದು ಈಜಿ ದಡ ಸೇರಿ ಬದುಕುಳಿದಿದ್ದಾಳೆ.
ನಾಗಮ್ಮ ಅವರಿಗೆ ಎಂಟು ವರ್ಷದ ಹಿಂದೆ ಮದುವೆಯಾಗಿದ್ದು, ಮನೆಯಲ್ಲಿ ನಿತ್ಯ ಜಗಳ ಆಗುತ್ತಿತ್ತು ಎಂದು ಹೇಳಲಾಗುತ್ತಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದಿದ್ದ ಆಕೆ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೆಟ್ಟಿಲುಗಳಿರುವ ದೊಡ್ಡ ಬಾವಿ. ಗಂಗೋತ್ರಿ ಕಾಲು ಬಡಿಯುತ್ತಾ ಆ ಮೆಟ್ಟಿಲುಗಳ ಕಡೆಗೆ ಬಂದು ಆ ಮೆಟ್ಟಿಲು ಹತ್ತಿ ಮೇಲೆ ಬಂದು ಬೊಬ್ಬೆ ಹೊಡೆದಿದ್ದಾಳೆ. ಆಗ ಊರಿನ ಜನರಿಗೆ ವಿಷಯ ಗೊತ್ತಾಗಿದೆ.
ಕೂಡಲೇ ಅವರೆಲ್ಲ ಓಡೋಡಿ ಬಂದು ಇಣುಕಿದಾಗ ತಾಯಿ ಮತ್ತು ಮಗು ಸಾವನ್ನಪ್ಪಿದರು. ಈ ನಡುವೆ ಅಗ್ನಿಶಾಮಕ ದಳ ಹಾಗು ಇತರರು ಸೇರಿ ಶವವನ್ನು ಮೇಲಕ್ಕೆ ಎತ್ತಲಾಯಿತು. ಈ ಸಂಬಂಧ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


