ರಾಜ್ಯ

ಮಂಗಳೂರಿನ ರೈಲುಗಳಿಗೆ ಪ್ರಮುಖ ವ್ಯಕ್ತಿಗಳು, ಸ್ಥಳಗಳ ಹೆಸರಿಡುವಂತೆ ಕೇಂದ್ರಕ್ಕೆ ನಳಿನ್ ಕುಮಾರ್ ಕಟೀಲ್ ಪತ್ರ

ಮಂಗಳೂರಿನ ಜನಪ್ರಿಯ ರೈಲುಗಳಿಗೆ ಕರಾವಳಿ ಕರ್ನಾಟಕದ ಪ್ರಮುಖ ವ್ಯಕ್ತಿಗಳು ಮತ್ತು ಸ್ಥಳಗಳ ಹೆಸರಿಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್...

ಮಂಗಳೂರಿನ ರೈಲುಗಳಿಗೆ ಪ್ರಮುಖ ವ್ಯಕ್ತಿಗಳು, ಸ್ಥಳಗಳ ಹೆಸರಿಡುವಂತೆ ಕೇಂದ್ರಕ್ಕೆ ನಳಿನ್ ಕುಮಾರ್ ಕಟೀಲ್ ಪತ್ರ
ನಳಿನ್ ಕುಮಾರ್ ಕಟೀಲ್
Published On :

ಮಂಗಳೂರು: ಮಂಗಳೂರಿನ ಜನಪ್ರಿಯ ರೈಲುಗಳಿಗೆ ಕರಾವಳಿ ಕರ್ನಾಟಕದ ಪ್ರಮುಖ ವ್ಯಕ್ತಿಗಳು ಮತ್ತು ಸ್ಥಳಗಳ ಹೆಸರಿಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಸಚಿವರಿಗೆ ಬರೆದ ಪತ್ರದಲ್ಲಿ ಅವರು ಈ ಪ್ರದೇಶದಲ್ಲಿ ಸಂಚರಿಸುವ ರೈಲುಗಳಿಗೆ ಹೊಸ ಹೆಸರುಗಳನ್ನು ಪ್ರಸ್ತಾಪಿಸಿದ್ದಾರೆ.

ಬೆಂಗಳೂರು-ಮಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್‌ ರೈಲಿಗೆ ರಾಣಿ ಅಬ್ಬಕ್ಕ ಎಕ್ಸ್‌ಪ್ರೆಸ್ ಎಂದು ಹೆಸರಿಡುವಂತೆ ಸಂಸದರು ಮನವಿ ಮಾಡಿದ್ದಾರೆ.

ತಿರುವನಂತಪುರಂ-ಮುಂಬೈ ಎಲ್‌ಟಿಟಿ ಎಕ್ಸ್‌ಪ್ರೆಸ್‌ಗೆ ನೇತ್ರಾವತಿ ಎಕ್ಸ್‌ಪ್ರೆಸ್ ಮತ್ತು ಎರ್ನಾಕುಲಂ-ಹಜರತ್ ನಿಜಾಮುದ್ದೀನ್ ರೈಲಿಗೆ ಮಂಗಳಾ ಲಕ್ಷದ್ವೀಪ ಎಕ್ಸ್‌ಪ್ರೆಸ್ ಎಂದು ಹೆಸರಿಡಿ. ಇದರಿಂದ ಪ್ರಯಾಣಿಕರು ತಮ್ಮ ಪ್ರಾದೇಶಿಕ ಹೆಸರುಗಳಿಂದ ರೈಲುಗಳನ್ನು ಸುಲಭವಾಗಿ ಗುರುತಿಸುತ್ತಾರೆ ಎಂದು ಕಟೀಲ್ ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಈ ಎರಡು ರೈಲುಗಳು ಮೊದಲು ಮಂಗಳೂರಿನಿಂದಲೇ ಆರಂಭವಾಗಿದ್ದವು. ಈ ರೈಲುಗಳಿಗೆ ಸ್ಥಳೀಯ ಹೆಸರಿಟ್ಟರೇ ಪ್ರಯಾಣಿಕರು ಸುಲಭವಾಗಿ ಗುರುತಿಸುತ್ತಾರೆ ಎಂದು ಕಟೀಲ್‌ ಹೇಳಿದ್ದಾರೆ.

ರೈಲುಗಳಿಗೆ ಈ ಪ್ರದೇಶದ ವ್ಯಕ್ತಿಗಳು, ಸ್ಥಳಗಳು ಮತ್ತು ನದಿಗಳ ಹೆಸರನ್ನು ಇಡುವುದರಿಂದ ಕರಾವಳಿ ಜಿಲ್ಲೆಯ ಜನರ ವಿಶ್ವಾಸ ಹೆಚ್ಚುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನು ಬೆಂಗಳೂರಿನಿಂದ ಮಂಗಳೂರಿಗೆ ಮೈಸೂರು ಮಾರ್ಗವಾಗಿ ಸಂಚರಿಸುವ (ರೈಲು ಸಂಖ್ಯೆ 16585/586) ರೈಲಿಗೆ ಮಂಗಳಾದೇವಿ ಎಕ್ಸ್‌ಪ್ರೆಸ್‌ ಎಂದು ನಾಮಕರಣ ಮಾಡುವಂತೆ ಕಟೀಲ್ ಅವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.