ರಾಜ್ಯ

ಕೆಐಎಡಿಬಿ ಕಚೇರಿಗಳಲ್ಲಿ ದಲ್ಲಾಳಿಗಳಿಗೆ ಲಗಾಮು: ಸರ್ಕಾರದಿಂದ ಸುತ್ತೋಲೆ ಪ್ರಕಟ

ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡ ರೈತರ ಪರವಾಗಿ ಕೆಐಎಡಿಬಿ ಕೇಂದ್ರ ಕಚೇರಿ ಮತ್ತು ವಲಯ ಕಚೇರಿಗಳಲ್ಲಿ ಕಾಣಿಸಿಕೊಳ್ಳುವ ದಲ್ಲಾಳಿಗಳು ಹಾಗೂ ಅವರ ಜೊತೆ ಕೈಜೋಡಿಸುವ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ ಎಚ್ಚರಿಸಿದ್ದು, ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದೆ.

ಕೆಐಎಡಿಬಿ ಕಚೇರಿಗಳಲ್ಲಿ ದಲ್ಲಾಳಿಗಳಿಗೆ ಲಗಾಮು: ಸರ್ಕಾರದಿಂದ ಸುತ್ತೋಲೆ ಪ್ರಕಟ
ಸಚಿವ ಎಂಬಿ ಪಾಟೀಲ್
Published On :

ಬೆಂಗಳೂರು: ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡ ರೈತರ ಪರವಾಗಿ ಕೆಐಎಡಿಬಿ ಕೇಂದ್ರ ಕಚೇರಿ ಮತ್ತು ವಲಯ ಕಚೇರಿಗಳಲ್ಲಿ ಕಾಣಿಸಿಕೊಳ್ಳುವ ದಲ್ಲಾಳಿಗಳು ಹಾಗೂ ಅವರ ಜೊತೆ ಕೈಜೋಡಿಸುವ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ ಎಚ್ಚರಿಸಿದ್ದು, ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದೆ.

ಈ ಬಗ್ಗೆ ಮಾತನಾಡಿರುವ ಅವರು, ಕೆಐಎಡಿಬಿ ಕಚೇರಿಗಳಲ್ಲಿ ಸಂತ್ರಸ್ತ ರೈತರ ಪರವಾಗಿ ಮತ್ತು ಕೈಗಾರಿಕಾ ನಿವೇಶನಗಳು ಮಂಜೂರಾಗಿರುವ ಉದ್ಯಮಿಗಳ ಅಥವಾ ನಿವೇಶನದಾರರ ಹೆಸರಿನಲ್ಲಿ ಕೆಲವು ಅನಪೇಕ್ಷಿತ ವ್ಯಕ್ತಿಗಳು ಬರುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಜಮೀನು ಕಳೆದುಕೊಂಡ ರೈತರು ಅಥವಾ ಕಾನೂನುಬದ್ಧ ವಾರಸುದಾರರು, ಪ್ರತಿನಿಧಿಗಳು ಮಾತ್ರ ಕಚೇರಿಗಳಿಗೆ ಭೇಟಿ ನೀಡಿ, ಅಹವಾಲು ಸಲ್ಲಿಸಬಹುದು' ಎಂದಿದ್ದಾರೆ.

ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ಕೆಐಎಡಿಬಿ ಕಚೇರಿಗಳಲ್ಲಿ ಕೂಡಲೇ ಕಡ್ಡಾಯವಾಗಿ ಪ್ರದರ್ಶಿಸಬೇಕು. ಭ್ರಷ್ಟಾಚಾರಕ್ಕೆ ಅನುವು ಮಾಡಿಕೊಡುವಂತಹ ಶಕ್ತಿಗಳಿಗೆ ಅಂಕುಶ ಹಾಕಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಕೆಐಎಡಿಬಿ ಕಚೇರಿ ಇದರ ಅನುಸರಣ ಕಾರ್ಯ ಮಾಡಬೇಕು ಎಂದು ಅವರು ನಿರ್ದೇಶಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.