ಕಲಬುರಗಿ: ಓವರ್‌ಹೆಡ್ ಟ್ಯಾಂಕ್ ನಿರ್ಮಾಣ ಕಾಮಗಾರಿಯ ಗುಂಡಿಗೆ ಬಿದ್ದು ಇಬ್ಬರು ಮಕ್ಕಳ ಸಾವು
ಓವರ್‌ಹೆಡ್ ಟ್ಯಾಂಕ್ ನಿರ್ಮಾಣ ಕಾಮಗಾರಿಯ ಗುಂಡಿಗೆ ಬಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಮೃತರನ್ನು ಅಜಯ್ (12) ಮತ್ತು ಅಭಿಷೇಕ್ (11) ಎಂದು ಗುರುತಿಸಲಾಗಿದೆ.

ಕಲಬುರಗಿ: ಓವರ್‌ಹೆಡ್ ಟ್ಯಾಂಕ್ ನಿರ್ಮಾಣ ಕಾಮಗಾರಿಯ ಗುಂಡಿಗೆ ಬಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಮೃತರನ್ನು ಅಜಯ್ (12) ಮತ್ತು ಅಭಿಷೇಕ್ (11) ಎಂದು ಗುರುತಿಸಲಾಗಿದೆ.
ಆಟವಾಡಲು ಹೋಗಿದ್ದ ಮುೂವರು ಮಕ್ಕಳು ಶನಿವಾರ ಸಂಜೆಯಿಂದ ನಾಪತ್ತೆಯಾಗಿದ್ದರು. ಈ ಪೈಕಿ ಇಬ್ಬರು ಬಾಲಕರು ಓವರ್ ಹೆಡ್ ಟ್ಯಾಂಕ್ ನಿರ್ಮಾಣಕ್ಕಾಗಿ ಮಾಡಲಾದ ಗುಂಡಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ಭಾನುವಾರ ಬೆಳಿಗ್ಗೆ ತಿಳಿದುಬಂದಿತು ಎಂದು ಬಿಜೆಪಿ ಮುಖಂಡ ಚಂದು ಪಾಟೀಲ್ ತಿಳಿಸಿದ್ದಾರೆ.
ಕಳೆದ ವರ್ಷದಿಂದ ಆರಂಭಗೊಂಡಿದ್ದ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಕಾಮಗಾರಿ ಕೆಲ ಸಮಸ್ಯೆಗಳಿಂದ ಆರು ತಿಂಗಳಿಂದ ಸ್ಥಗಿತಗೊಂಡಿತ್ತು. ಇದರ ಸುತ್ತ ಕಾಮಗಾರಿ ನಡೆಸುತ್ತಿರುವ ಸಂಸ್ಥೆ ಯಾವುದೇ ಬೇಲಿ ನಿರ್ಮಿಸದಿರುವುದು ಮಕ್ಕಳ ಸಾವಿಗೆ ಕಾರಣವಾಗಿದೆ. ಕಂಪನಿಯ ನಿರ್ಲಕ್ಷ್ಯದಿಂದ ನಾವು ಇಬ್ಬರು ಮಕ್ಕಳನ್ನು ಕಳೆದುಕೊಂಡಿದ್ದೇವೆ ಎಂದು ಅವರು ಹೇಳಿದರು.
ಓವರ್ ಹೆಡ್ ವಾಟರ್ ಟ್ಯಾಂಕ್ ನಿರ್ಮಾಣಕ್ಕಾಗಿ ಕಾಮಗಾರಿಯನ್ನು ಕಳೆದ ಒಂದು ವರ್ಷದಿಂದ ಮಾಡುತ್ತಿದ್ದು, ಅದಕ್ಕಾಗಿ ಗುಂಡಿಯನ್ನು ನಿರ್ಮಾಣ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


