ಕರಾವಳಿ ಕರ್ನಾಟಕದಲ್ಲಿ ಮಳೆಯ ಆರ್ಭಟ: ನದಿಗಳ ಹರಿವಿನ ಮಟ್ಟ ಏರಿಕೆ
ಕರ್ನಾಟಕದ ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಹಲವು ನದಿಗಳು ಉಕ್ಕಿ ಹರಿಯುತ್ತಿವೆ.

ದಕ್ಷಿಣ ಕನ್ನಡ: ಕರ್ನಾಟಕದ ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಹಲವು ನದಿಗಳು ಉಕ್ಕಿ ಹರಿಯುತ್ತಿವೆ.
ತಗ್ಗು ಪ್ರದೇಶಗಳು ಮಳೆಯ ತೀವ್ರತೆಗೆ ಜಲಾವೃತಗೊಂಡಿವೆ. ನೇತ್ರಾವತಿ, ಫಲ್ಗುಣಿ ಹಾಗೂ ಹಲವು ತೊರೆಗಳಲ್ಲಿನ ನೀರಿನ ಮಟ್ಟ ಏರಿಕೆಯಾಗಿದ್ದು ದಕ್ಷಿಣ ಕನ್ನಡದಲ್ಲಿ ನದಿ ದಡದಲ್ಲಿ ವಾಸಿಸುವ ಜನರಿಗೆ ಅಪಾಯತಂದೊಡ್ಡಿದೆ.
ಬಂಟ್ವಾಳ ತಾಲೂಕಿನಲ್ಲಿ ಕೆಲವು ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ವರ್ಗಾವಣೆ ಮಾಡಲಾಗಿದೆ. ತಾಲ್ಲೂಕಿನಲ್ಲಿ ಅಡಿಕೆ ತೋಟಗಳೂ ಸಹ ಮುಳುಗಡೆಯಾಗಿದ್ದು, ರೈತರಲ್ಲಿ ಆತಂಕ ಮೂಡಿಸಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಇನ್ನು ಪ್ರಸಿದ್ಧ ಕ್ಷೇತ್ರ ಸುಬ್ರಹ್ಮಣ್ಯದಲ್ಲಿ ಸ್ನಾನಘಟ್ಟ ಮುಳುಗಡೆಯಾಗಿದ್ದು, ದೇವಾಲಯಕ್ಕೆ ಬರುವ ಭಕ್ತರಿಗೆ ಕುಮಾರಧಾರ ನದಿಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಜಲಾವೃತಗೊಂಡು ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


