ರಾಜ್ಯ

ರಾಜ್ಯದಲ್ಲಿ ಭಾರೀ ಮಳೆ: ಮುಖ್ಯ ಕಾರ್ಯದರ್ಶಿಯಿಂದ ವಸ್ತು ಸ್ಥಿತಿ ವರದಿ ಕೇಳಿದ ಸಿಎಂ ಸಿದ್ದರಾಮಯ್ಯ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಹಾನಿಯ ವರದಿಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಂದ ವಸ್ತು ಸ್ಥಿತಿ ವರದಿ ಕೇಳಿದ್ದಾರೆ.

ರಾಜ್ಯದಲ್ಲಿ ಭಾರೀ ಮಳೆ: ಮುಖ್ಯ ಕಾರ್ಯದರ್ಶಿಯಿಂದ ವಸ್ತು ಸ್ಥಿತಿ ವರದಿ ಕೇಳಿದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Published On :

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಹಾನಿಯ ವರದಿಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಂದ ವಸ್ತು ಸ್ಥಿತಿ ವರದಿ ಕೇಳಿದ್ದಾರೆ.

ರಾಜ್ಯದ ಬಹುತೇಕ ಭಾಗಗಳಲ್ಲಿ ವಿಶೇಷವಾಗಿ ಕರಾವಳಿ ಮತ್ತು ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದೆ. ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ವಸತಿ ಪ್ರದೇಶಗಳು ಜಲಾವೃತವಾಗಿವೆ. ಬೆಂಗಳೂರು ನಗರವು ತುಂತುರು ಮಳೆ ಮತ್ತು ಮೋಡ ಕವಿದ ವಾತಾವರಣವಿದೆ. ಐಟಿ ನಗರದಲ್ಲಿ ದಿನವಿಡೀ ಮೋಡ ಕವಿದ ವಾತಾವರಣವಿತ್ತು.

ಮುಂಗಾರು ಹಂಗಾಮಿನಲ್ಲಿ ರಾಜ್ಯದ ಕೆಲವು ಪ್ರದೇಶಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಹಾನಿ ಹಾಗೂ ಮಳೆ ಕೊರತೆ ಕುರಿತು ಜಿಲ್ಲಾವಾರು ವರದಿ ನೀಡುವಂತೆ ಸಿದ್ದರಾಮಯ್ಯ ಕೇಳಿದ್ದರು.

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಬೆಳಗಾವಿ ಜಿಲ್ಲೆಯ ಸುತ್ತಮುತ್ತಲಿನ ಪ್ರದೇಶಗಳು ಜಲಾವೃತವಾಗಿವೆ. ಘಟಪ್ರಭಾ ನದಿ ತುಂಬಿ ಹರಿಯುತ್ತಿದ್ದು, ಕರ್ನಾಟಕದ ನಯಾಗರ ಎಂದೇ ಖ್ಯಾತವಾಗಿರುವ ಗೋಕಾಕ ಜಲಪಾತ ಪೂರ್ಣ ವೈಭವದಿಂದ ಹರಿಯುತ್ತಿದೆ.

ಭಾರೀ ಮಳೆಗೆ ಮನೆಗಳು ಕುಸಿದಿರುವ ವರದಿಗಳ ನಡುವೆಯೇ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತುಂಗಾ, ಭದ್ರಾ ಮತ್ತು ಹೇಮಾವತಿ ನದಿಗಳ ಒಳಹರಿವು ತೀವ್ರ ಏರಿಕೆ ಕಂಡಿದೆ. ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ವರದಿಯಾಗಿದೆ. ಸಣ್ಣ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಗಳು ಮುಳುಗಡೆಯಾಗಿದ್ದು, ಸಂಪರ್ಕ ಕಡಿತಗೊಂಡಿದೆ.

ಕಾವೇರಿ ನದಿ ತೀರದ ಜನರು ಭಯಭೀತರಾಗಿದ್ದಾರೆ. ರಾಜ್ಯದ ಗುಡ್ಡಗಾಡು ಪ್ರದೇಶವು ಭೂಕುಸಿತಕ್ಕೆ ಸಾಕ್ಷಿಯಾಗುತ್ತಿದ್ದು, ಸಕಲೇಶಪುರ ಪಟ್ಟಣದ ಸಮೀಪ ಮರಗಳು ಉರುಳಿಬಿದ್ದು, ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಸಂಚಾರಕ್ಕೆ ತೊಂದರೆಯಾಗಿದೆ.

ದಕ್ಷಿಣ ಕನ್ನಡದ ಕರಾವಳಿ ಜಿಲ್ಲೆಯಲ್ಲಿ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ನದಿಗಳು, ತೊರೆಗಳು ಅಪಾಯದ ಮಟ್ಟ ದಾಟಿವೆ. ಭಾರೀ ಮಳೆಗೆ ಸುಮಾರು 50 ಮನೆಗಳಿಗೆ ಹಾನಿಯಾಗಿದ್ದು, 300ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಬಿದ್ದಿವೆ. ಕುಮಾರಧಾರ ನದಿ ಮತ್ತು ಅದರ ಉಪನದಿ ದರ್ಪಣ ತೀರ್ಥ ತುಂಬಿ ಹರಿಯುತ್ತಿರುವುದರಿಂದ ಸುಮಾರು 35 ಜನರನ್ನು ರಕ್ಷಣಾ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.

ಜಿಲ್ಲಾ ಅಧಿಕಾರಿಗಳು ಜನರಿಗೆ ಸಹಾಯ ಮಾಡಲು ಗೃಹರಕ್ಷಕರು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ನಿಯೋಜಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.