ಶಿವಮೊಗ್ಗ ವಿಮಾನ ನಿಲ್ದಾಣ: ವಿಮಾನ ಹಾರಾಟ ಆಗಸ್ಟ್ 31 ರಿಂದ ಆರಂಭ
ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 31ರಿಂದ ತನ್ನ ಕಾರ್ಯಾಚರಣೆ ಆರಂಭಿಸಲಿದ್ದು, ಅಂದು ಮೊದಲ ವಿಮಾನದಲ್ಲಿ ಪ್ರಯಾಣಿಸುವ ಭಾಗ್ಯ ಮಲೆನಾಡಿನ ಜನರಿಗೆ ಸಿಗಲಿದೆ.

ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 31ರಿಂದ ತನ್ನ ಕಾರ್ಯಾಚರಣೆ ಆರಂಭಿಸಲಿದ್ದು, ಅಂದು ಮೊದಲ ವಿಮಾನದಲ್ಲಿ ಪ್ರಯಾಣಿಸುವ ಭಾಗ್ಯ ಮಲೆನಾಡಿನ ಜನರಿಗೆ ಸಿಗಲಿದೆ.
ಈ ಮುಂಚೆ ಆಗಸ್ಟ್ 11ರಿಂದ ಆರಂಭವಾಗಬೇಕಿತ್ತು. ತಾಂತ್ರಿಕ ಕಾರಣಗಳಿಂದ 31ಕ್ಕೆ ಹೋಗಿದ್ದು ಇಂಡಿಗೊ ಏರ್ ಲೈನ್ಸ್ ತನ್ನ ಬುಕ್ಕಿಂಗ್ ಅನ್ನು ಆರಂಭಿಸಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ತಿರುಪತಿಗೂ ಸಂಪರ್ಕ:
ಶಿವಮೊಗ್ಗದಿಂದ ತಿರುಪತಿ, ಗೋವಾ ಮತ್ತು ಹೈದರಾಬಾದ್ ನಗರಗಳಿಗೆ ಉಡಾನ್ ಯೋಜನೆಯಡಿ ವಿಮಾನಯಾನ ಸೇವೆ ನೀಡಲು ಮೂರು ಏರ್ ಲೈನ್ಸ್ ಸಂಸ್ಥೆಗಳಿಗೆ ಅನುಮತಿ ಸಿಕ್ಕಿದೆ ಎಂದೂ ಸಚಿವರು ತಿಳಿಸಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗ ವಿಮಾನ ನಿಲ್ದಾಣ ಜುಲೈ 20ರ ವೇಳೆಗೆ ಸಜ್ಜು
ಸ್ಪೈಸ್ ಜೆಟ್, ಸ್ಟಾರ್ ಏರ್ ಲೈನ್ಸ್ ಮತ್ತು ಅಲಯನ್ಸ್ ಏರ್ ಸಂಸ್ಥೆಗಳು ಈ ರಹದಾರಿಗಳಲ್ಲಿ ವಿಮಾನ ಸಂಚಾರ ಮಾಡುವ ಸಂಬಂಧ ಕರೆದಿದ್ದ ಟೆಂಡರ್ ನಲ್ಲಿ ಭಾಗವಹಿಸಿ ಯಶಸ್ವಿಯಾಗಿವೆ. ಸದ್ಯಕ್ಕೆ ಹಗಲು ವೇಳೆಯ ವಿಮಾನ ಸಂಚಾರ ಮಾತ್ರ ಇರುತ್ತದೆ. ರಾತ್ರಿ ವೇಳೆ ಲ್ಯಾಂಡಿಂಗ್ ವ್ಯವಸ್ಥೆಗೆ ಸಂಬಂಧಿಸಿದ ಕಾಮಗಾರಿ ಪ್ರಗತಿಯಲ್ಲಿದ್ದು ಆದಷ್ಟು ಬೇಗ ಮುಗಿಯಲಿದೆ ಎಂದು ಅವರು ವಿವರಿಸಿದ್ದಾರೆ.
ಉಡಾನ್ ಯೋಜನೆಯಡಿ ಅನುಮತಿ ಪಡೆದಿರುವ ವಿಮಾನಯಾನ ಸಂಸ್ಥೆಗಳೂ ವಿಮಾನ ಸಂಚಾರಕ್ಕೆ ಸಿದ್ಧತೆ ನಡೆಸಿದ್ದು, ನಾಗರಿಕ ವಿಮಾನಯಾನ ನಿರ್ದೇಶನಾಲಯದ ಅನುಮತಿ ಸಿಕ್ಕ ನಂತರ ಅವೂ ಕಾರ್ಯಾಚರಣೆ ನಡೆಸಲಿವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


