ಉಡುಪಿ ಕಾಲೇಜು ವಿಡಿಯೋ ಪ್ರಕರಣ: ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ
ಉಡುಪಿ ಕಾಲೇಜು ವಿಡಿಯೋ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸುವಂತೆ ಒತ್ತಾಯಿಸಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡರು ಬೆಂಗಳೂರಿನಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಬೆಂಗಳೂರು: ಉಡುಪಿ ಕಾಲೇಜು ವಿಡಿಯೋ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸುವಂತೆ ಒತ್ತಾಯಿಸಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡರು ಬೆಂಗಳೂರಿನಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ವೇಳೆ ಬೆಂಗಳೂರಿನಲ್ಲಿರುವ ಗೃಹ ಸಚಿವ ಜಿ ಪರಮೇಶ್ವರ ಅವರ ನಿವಾಸಕ್ಕೆ ಬಿಜೆಪಿ ಯುವ ಮೋರ್ಚಾ ಸದಸ್ಯರು ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಹಲವರನ್ನು ವಶಕ್ಕೆ ಪಡೆದುಕೊಂಡರು.
ಪ್ರಕರಣವನ್ನು ಮಕ್ಕಳಾಟ, ವಿಚಾರಕ್ಕೆ ರಾಜಕೀಯ ಬಣ್ಣ ನೀಡಲಾಗುತ್ತಿದೆ ಎಂಬ ಗೃಹ ಸಚಿವ ಹೇಳಿಕೆಗೆ ತೀವ್ರವಾಗಿ ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಚಿವ ಹಾಗೂ ಮಲ್ಲೇಶ್ವರಂನ ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರನ್ನು. ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಓದುತ್ತಿರುವ ಮೂವರು ಬಾಲಕಿಯರ ವಿರುದ್ಧ ಮಲ್ಪೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಕರಣವನ್ನು ಕೇಂದ್ರ ತನಿಖಾ ದಳಕ್ಕೆ ಒಪ್ಪಿಸಬೇಕೆಂದು ಆಗ್ರಹಿಸಿದರು.
ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳಲು ಪೊಲೀಸರು ವಿಳಂಬ ಮಾಡುತ್ತಿದ್ದಾರೆ ಎಂದು ಇತರೆ ಬಿಜೆಪಿ ಮುಖಂಡರು ಆರೋಪಿಸಿದರು.
ಘಟನೆಯನ್ನು ಮುಚ್ಚಿಹಾಕುವ ಯತ್ನ ನಡೆಯುತ್ತಿವೆ. ತುಷ್ಟೀಕರಣ ರಾಜಕಾರಣವೇ ಇದಕ್ಕೆ ಕಾರಣ ಎಂದು ಹೇಳಿದರು.
ಏತನ್ಮಧ್ಯೆ, ಪ್ರಕರಣದ ಸಮಗ್ರ ತನಿಖೆಯ ಅಗತ್ಯವಿದ್ದು, ಇದರಲ್ಲಿ ಭಾಗಿಯಾಗಿರುವ ಯುವತಿಯರನ್ನು ಬಂಧಿಸುವ ಅಗತ್ಯವಿದೆ ಎಂದು ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಹೇಳಿದ್ದಾರೆ.
ಬಿಜೆಪಿ ಎಂಎಲ್ ಸಿ ತೇಜಸ್ವಿನಿ ಗೌಡ ಅವರು ಮಾತನಾಡಿ, ಸಾಕ್ಷ್ಯ ನಾಶಪಡಿಸಿ ಘಟನೆ ಬೆಳಕಿಗೆ ತಂದವರ ಮೇಲೆ ಒತ್ತಡ ಹೇರುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


