ರಾಜ್ಯ

ಉಡುಪಿ ವಿಡಿಯೋ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು

ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನ್ಯಾಯಾಲಯ ಶುಕ್ರವಾರ ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಉಡುಪಿ ವಿಡಿಯೋ ಪ್ರಕರಣ: ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು
ಸಾಂದರ್ಭಿಕ ಚಿತ್ರ
Published On :

ಉಡುಪಿ: ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನ್ಯಾಯಾಲಯ ಶುಕ್ರವಾರ ಮೂವರು ವಿದ್ಯಾರ್ಥಿನಿಯರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಶೌಚಾಲಯದಲ್ಲಿ ಹಿಂದೂ ಯುವತಿಯ ವಿಡಿಯೋ ಮಾಡಿದ ಆರೋಪದ ಮೇಲೆ ಶಬನಾಜ್, ಆಲ್ಫಿಯಾ, ಆಲಿಮಾತುಲ್ ಶಾಫಿಯಾ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮೂವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಉಡುಪಿಯ ಪ್ರಥಮ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು, ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

ತನಿಖಾಧಿಕಾರಿಗಳ ತನಿಖೆಗೆ ಸಹಕರಿಸಬೇಕು, ವಿಚಾರಣೆ ದಿನ ನ್ಯಾಯಾಲಯಕ್ಕೆ ಕಡ್ಡಾಯವಾಗಿ ಹಾಜರಾಗಬೇಕು ಮತ್ತು ಸಾಕ್ಷಿ ಗಳಿಗೆ ಯಾವುದೇ ಬೆದರಿಕೆ ಹಾಕಬಾರದು ಎಂಬ ಷರತ್ತುಗಳೊಂದಿಗೆ ತಲಾ 20,000ರೂ. ಬಾಂಡ್ ಮೇಲೆ ಕೋರ್ಟ್ ಜಾಮೀನು ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.