ರಾಜ್ಯ

ಚುನಾವಣಾ ಕರ್ತವ್ಯಕ್ಕೆ ಶಿಕ್ಷಕರನ್ನು ನಿಯೋಜಿಸಬೇಡಿ: ಬಿಬಿಎಂಪಿಗೆ ಶಾಲಾ ಶಿಕ್ಷಣ ಇಲಾಖೆ ಆಗ್ರಹ

ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಇತರ ಕೆಲಸಗಳಿಗೆ ತಮ್ಮ ಶಿಕ್ಷಕರನ್ನು ನಿಯೋಜಿಸದಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಬಿಬಿಎಂಪಿಗೆ ಒತ್ತಾಯಿಸಿದ್ದಾರೆ.

ಚುನಾವಣಾ ಕರ್ತವ್ಯಕ್ಕೆ ಶಿಕ್ಷಕರನ್ನು ನಿಯೋಜಿಸಬೇಡಿ: ಬಿಬಿಎಂಪಿಗೆ ಶಾಲಾ ಶಿಕ್ಷಣ ಇಲಾಖೆ ಆಗ್ರಹ
ಬಿಬಿಎಂಪಿ ಕಚೇರಿ
Published On :

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಇತರ ಕೆಲಸಗಳಿಗೆ ತಮ್ಮ ಶಿಕ್ಷಕರನ್ನು ನಿಯೋಜಿಸದಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಬಿಬಿಎಂಪಿಗೆ ಒತ್ತಾಯಿಸಿದ್ದಾರೆ.

ಬಿಬಿಎಂಪಿ ವಿಶೇಷ ಆಯುಕ್ತರಿಗೆ (ಚುನಾವಣೆ) ಪತ್ರ ಬರೆದಿದುವರ ಆಯುಕ್ತರು, ಈ ಹಿಂದೆ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಉಲ್ಲೇಖಿಸಿ, ಶಿಕ್ಷಕರ ನಿಯೋಜನೆಯನ್ನು ಅಂತಹ ಕೆಲಸಕ್ಕೆ ನಿರ್ಬಂಧಿಸಲಾಗಿದೆ ಎಂದಿದ್ದಾರೆ.

'ಸಾರ್ವಜನಿಕ ರಜಾದಿನಗಳು, ದಸರಾ ಮತ್ತು ಬೇಸಿಗೆ ರಜೆಯನ್ನು ಪರಿಗಣಿಸಿ ನಾವು 244 ಕೆಲಸದ ದಿನಗಳನ್ನು ನಿಗದಿಪಡಿಸಿದ್ದೇವೆ. ಪಠ್ಯೇತರ ಚಟುವಟಿಕೆಗಳು, ಪರೀಕ್ಷೆಗಳು ಮತ್ತು ಮೌಲ್ಯಮಾಪನ ಕಾರ್ಯಗಳನ್ನು ನಡೆಸಲು 64 ದಿನಗಳನ್ನು ಮೀಸಲಿಡಲಾಗಿದೆ. ಆದರೆ, ಅವರನ್ನು ಚುನಾವಣಾ ಸಂಬಂಧಿತ ಕೆಲಸಕ್ಕೆ ನಿಯೋಜಿಸುವುದರಿಂದ ವೇಳಾಪಟ್ಟಿಗೆ ತೊಂದರೆ ಮತ್ತು ಪರಿಣಾಮ ಬೀರುತ್ತದೆ' ಎಂದಿದ್ದಾರೆ. 

ಬೋಧನಾ ಗುಣಮಟ್ಟದ ಮೇಲೂ ಪರಿಣಾಮ ಬೀರುವುದರಿಂದ ಶಿಕ್ಷಕರನ್ನು ಅಂತಹ ಕೆಲಸಗಳಿಗೆ ನಿಯೋಜಿಸಬೇಡಿ ಎಂದು ನಾವು ವಿನಂತಿಸುತ್ತೇವೆ ಎಂದು ಸುತ್ತೋಲೆ ಹೊರಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.