ರಾಜ್ಯಪಾಲ ಗೆಹ್ಲೋಟ್‌ರನ್ನು ಬಿಟ್ಟು ಹಾರಿದ ವಿಮಾನ; ವಿಷಾದ ವ್ಯಕ್ತಪಡಿಸಿದ ಏರ್ ಏಷ್ಯಾ
ತಡವಾಗಿ ಆಗಮಿಸಿದರು ಎಂಬ ಕಾರಣ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಬಿಟ್ಟು ಹಾರಿದ್ದ ಏರ್ ಏಷ್ಯಾ ವಿಮಾನಯಾನ ಸಂಸ್ಥೆ ಶುಕ್ರವಾರ ಈ ಸಂಬಂಧ ತೀವ್ರ ವಿಷಾದ ವ್ಯಕ್ತಪಡಿಸಿದೆ.

ಬೆಂಗಳೂರು: ತಡವಾಗಿ ಆಗಮಿಸಿದರು ಎಂಬ ಕಾರಣ ನೀಡಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಬಿಟ್ಟು ಹಾರಿದ್ದ ಏರ್ ಏಷ್ಯಾ ವಿಮಾನಯಾನ ಸಂಸ್ಥೆ ಶುಕ್ರವಾರ ಈ ಸಂಬಂಧ ತೀವ್ರ ವಿಷಾದ ವ್ಯಕ್ತಪಡಿಸಿದೆ.
ರಾಜ್ಯಪಾಲರನ್ನು ಬಿಟ್ಟು ಹಾರಿದ್ದ ವಿಮಾನಯಾನ ಸಂಸ್ಥೆ ವಿರುದ್ಧ ರಾಜ್ಯಪಾಲರ ಕಚೇರಿ "ಶಿಷ್ಟಾಚಾರ ಉಲ್ಲಂಘನೆ" ಪ್ರಕರಣ ದಾಖಲಿಸಿದ ಬೆನ್ನಲ್ಲೇ ವಿಮಾನಯಾನ ಸಂಸ್ಥೆ ವಿಷಾದ ವ್ಯಕ್ತಪಡಿಸಿದೆ.
ರಾಜ್ಯಪಾಲರ ಪ್ರೋಟೋಕಾಲ್ ಅಧಿಕಾರಿ ಎಂ.ವೇಣುಗೋಪಾಲ್ ಅವರು ಏರ್‌ಪೋರ್ಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಐಎಕ್ಸ್ ಕನೆಕ್ಟ್ ಹಾಗೂ ಇದಕ್ಕೆ ಕಾರಣರಾದ ಏರ್‌ಲೈನ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಇನ್ನು ಈ ಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸಿದ ವಿಮಾನಯಾನ ಸಂಸ್ಥೆ, ರಾಜ್ಯಪಾಲರ ಕಚೇರಿಯೊಂದಿಗೆ ಸಂಪರ್ಕದಲ್ಲಿರುವುದಾಗಿ ಹೇಳಿದೆ.
ಘಟನೆಗೆ ನಾವು ಪ್ರಾಮಾಣಿಕವಾಗಿ ವಿಷಾದಿಸುತ್ತೇವೆ. ತನಿಖೆ ನಡೆಸಲಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಏರ್‌ಲೈನ್‌ನ ಹಿರಿಯ ಅಧಿಕಾರಿಗಳ ತಂಡ, ಕಳವಳಗಳನ್ನು ಪರಿಹರಿಸಲು ಗವರ್ನರ್ ಕಚೇರಿಯೊಂದಿಗೆ ಸಂಪರ್ಕದಲ್ಲಿದೆ ಎಂದು ಎಐಎಕ್ಸ್ ಕನೆಕ್ಟ್ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


