ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ; ಶೀಘ್ರದಲ್ಲೇ ನಿತಿನ್ ಗಡ್ಕರಿ ಭೇಟಿ
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಖುದ್ದು ಹೆದ್ದಾರಿಯನ್ನು ಪರಿಶೀಲಿಸಿದರು.

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಖುದ್ದು ಹೆದ್ದಾರಿಯನ್ನು ಪರಿಶೀಲಿಸಿದರು.
ಮಂಡ್ಯ ಬಳಿಯ ಎಕ್ಸ್ಪ್ರೆಸ್ವೇ ಅನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಶೀಘ್ರದಲ್ಲೇ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ, ಎಕ್ಸ್ಪ್ರೆಸ್ವೇಯಲ್ಲಿನ ಕೆಲ ದೋಷಗಳು ಮತ್ತು ಬದಲಾವಣೆಗಳ ಬಗ್ಗೆ ಮಾಹಿತಿ ನೀಡುವುದಾಗಿ ಹೇಳಿದ್ದಾರೆ.
ಬಿಜೆಪಿ ಸರ್ಕಾರ, ಅಪಘಾತಗಳಿಗೆ ಕಾರಣವಾಗುತ್ತಿರುವ ನ್ಯೂನತೆಗಳನ್ನು ನಿರ್ಲಕ್ಷಿಸಿ ತರಾತುರಿಯಲ್ಲಿ ಎಕ್ಸ್ಪ್ರೆಸ್ವೇ ಉದ್ಘಾಟನೆ ಮಾಡಿದೆ ಎಂದು ಸಿಎಂ ಆರೋಪಿಸಿದರು.
"ನಾನು ದೆಹಲಿಗೆ ಹೋಗುತ್ತಿದ್ದೇನೆ ಮತ್ತು ಗಡ್ಕರಿ ಅವರನ್ನು ಭೇಟಿ ಮಾಡುತ್ತೇನೆ. ಎಕ್ಸ್ಪ್ರೆಸ್ವೇಯಲ್ಲಿನ ದೋಷಗಳನ್ನು ಸರಿಪಡಿಸುವಂತೆ ಕೇಳಿಕೊಳ್ಳುತ್ತೇನೆ ಎಂದರು.
ಸರ್ವೀಸ್ ರಸ್ತೆ ಸುಧಾರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ 81 ಕೋಟಿ ರೂಪಾಯಿ ಪ್ರಸ್ತಾವನೆ ಕಳುಹಿಸಲಾಗಿದೆ. ಅದರಂತೆ ಈ ವರ್ಷ ನವೆಂಬರ್ನಿಂದ ಕಾಮಗಾರಿ ಆರಂಭವಾಗಲಿದೆ ಎಂದರು.
ಇನ್ನೂ ಅಪೂರ್ಣವಾಗಿರುವ ಟೋಲ್ಗಳಲ್ಲಿ ಟೋಲ್ ಸಂಗ್ರಹ ನಡೆಯುತ್ತಿದೆ ಎಂದುಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್ಎಚ್ಎಐ) ಟೋಲ್ ವಿಧಿಸುತ್ತಿರುವುದರಿಂದ ಅದರಲ್ಲಿ ರಾಜ್ಯ ಸರ್ಕಾರಕ್ಕೆ ಪಾತ್ರ ಇಲ್ಲ ಎಂದರು.
"ನಾವು ಟೋಲ್ ಸಂಗ್ರಹಿಸುತ್ತಿಲ್ಲ ಆದರೆ ನಾನು ಅವರೊಂದಿಗೆ ಮಾತನಾಡುತ್ತೇನೆ" ಎಂದು ಮುಖ್ಯಮಂತ್ರಿ ಹೇಳಿದರು.
ಅಪಘಾತಗಳ ಕುರಿತು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಎನ್ಎಚ್ಎಐ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎಂದು ಸಿಎಂ ತಿಳಿಸಿದರು.
ಎಕ್ಸ್ ಪ್ರೆಸ್ ವೇ ಸಂಚಾರಕ್ಕೆ ಮುಕ್ತವಾದ ನಂತರ ಸ್ಪೀಡ್ ಡಿಟೆಕ್ಟರ್ ಅಳವಡಿಸಿಲ್ಲ ಎಂದ ಸಿಎಂ, ಯೋಜನೆ ಅವೈಜ್ಞಾನಿಕ ಎಂದು ಕರೆಯಲು ನಿರಾಕರಿಸಿದರು. ಆದರೆ ಹೆಚ್ಚಿನ ಸುರಕ್ಷತಾ ಕ್ರಮಗಳ ಅಗತ್ಯವಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


