ಮಂಡ್ಯ: ನಾಲೆಗೆ ಉರುಳಿ ಬಿದ್ದ ಕಾರು, ನಾಲ್ವರು ಮಹಿಳೆಯರು ಸಾವು
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಾಮನಹಳ್ಳಿ ಬಳಿ ಶನಿವಾರ ಕಾರು ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ.

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಾಮನಹಳ್ಳಿ ಬಳಿ ಶನಿವಾರ ಕಾರು ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ.
ಇಂದು ರಾತ್ರಿ ರಾತ್ರಿ 8.30ರ ಸುಮಾರಿಗೆ ಗಾಮನಹಳ್ಳಿ ಗ್ರಾಮದ ಹೊರವಲಯದ ತುರುಗನೂರು ಶಾಖಾ ನಾಲೆಗೆ ಕಾರು ಉರುಳಿ ಬಿದ್ದಿದ್ದು, ಕಾರಿನಲ್ಲಿದ್ದ ಐವರ ಪೈಕಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಕಾರು ಚಾಲಕ ಮನೋಜ್ ಪ್ರಾಣಾಪಯದಿಂದ ಪಾರಾಗಿದ್ದಾರೆ.
ಮೃತ ಮಹಿಳೆಯರನ್ನು ಟಿ.ನರಸೀಪುರ ತಾಲೂಕು ಗೊರವನಹಳ್ಳಿ ಗ್ರಾಮದ ದೊಡ್ಡಯ್ಯ ಎಂಬುವರ ಪತ್ನಿ ಮಹದೇವಮ್ಮ, ಸಂಬಂಧಿಕರಾದ ರೇಖಾ, ಸಂಜನಾ, ಮಹದೇವಿ ಎಂದು ಗುರುತಿಸಲಾಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ಪೊಲೀಸರು ನಾಲ್ವರು ಮಹಿಳೆಯರ ಶವವನ್ನು ನಾಲೆ ನೀರಿನಿಂದ ಹೊರ ತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ.
ಘಟನೆ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


