ರಾಜ್ಯ

ವಿಧಾನಸೌಧ ಸುತ್ತಮುತ್ತ ಡ್ರೋಣ್ ಹಾರಾಟ: ಇಬ್ಬರ ಬಂಧನ

ವಿಧಾನಸೌಧದ ಪೂರ್ವ ದ್ವಾರದ ಬಳಿ ಡ್ರೋಣ್ ಹಾರಾಟ ನಡೆಸಿದ ಆರೋಪದ ಮೇಲೆ ನಗರದ ಖಾಸಗಿ ಕಂಪನಿಯೊಂದರ ಇಬ್ಬರು ಉದ್ಯೋಗಿಗಳನ್ನು ಬಂಧನಕ್ಕೊಳಪಡಿಸಲಾಗಿದೆ.

ವಿಧಾನಸೌಧ ಸುತ್ತಮುತ್ತ ಡ್ರೋಣ್ ಹಾರಾಟ: ಇಬ್ಬರ ಬಂಧನ
ಸಂಗ್ರಹ ಚಿತ್ರ
Published On :

ಬೆಂಗಳೂರು: ವಿಧಾನಸೌಧದ ಪೂರ್ವ ದ್ವಾರದ ಬಳಿ ಡ್ರೋಣ್ ಹಾರಾಟ ನಡೆಸಿದ ಆರೋಪದ ಮೇಲೆ ನಗರದ ಖಾಸಗಿ ಕಂಪನಿಯೊಂದರ ಇಬ್ಬರು ಉದ್ಯೋಗಿಗಳನ್ನು ಬಂಧನಕ್ಕೊಳಪಡಿಸಲಾಗಿದೆ.

ಅರುಣ್, ವಿನೋದ್ ಬಂಧನಕ್ಕೊಳಗಾದ ಯುವಕರಾಗಿದ್ದಾರೆ. ಬಂಧನದ ಬಳಿಕ ವಿಶೇಷ ಜಾಮೀನಿನ ಮೇಲೆ ಇಬ್ಬರೂ ಬಿಡುಗಡೆಯಾಗಿದ್ದಾರೆ.

ವಿಧಾನಸೌಧ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಡ್ರೋಣ್ ಹಾರಿಸುವುದಕ್ಕೆ ನಿರ್ಬಂಧಿಸಿರುವ ವಿಚಾರ ತಿಳಿಯದೆ ಖಾಸಗಿ ಕಂಪನಿಯೊಂದರ 15 ವರ್ಷಗಳ ಸಂಭ್ರಮಾಚರಣೆ ಹಿನ್ನೆಲೆ ವಿಡಿಯೋ ಚಿತ್ರೀಕರಣಕ್ಕೆ ಈ ಇಬ್ಬರು ಯುವಕರು ವಿಧಾನಸೌಧದ ಬಳಿ ಬಂದಿದ್ದರು.

ಇದರಂತೆ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಡ್ರೋಣ್ ಹಾರಿಸಿದ್ದರು, ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ವಿಧಾನಸೌಧ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. ಇದರಂತೆ ಇಬ್ಬರನ್ನು ಬಂಧನಕ್ಕೊಳಪಡಿಸಿ, ಡ್ರೋಣ್ ನ್ನು ವಶಕ್ಕೆ ಪಡೆದುಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.