ಉಡುಪಿ ವಿಡಿಯೋ ಪ್ರಕರಣ: ಹೊಸ ತನಿಖಾಧಿಕಾರಿಯಾಗಿ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ನೇಮಕ
ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತನಿಖಾಧಿಕಾರಿ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಅವರನ್ನು ನೇಮಕ ಮಾಡಲಾಗಿದೆ.

ಉಡುಪಿ: ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತನಿಖಾಧಿಕಾರಿ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಅವರನ್ನು ನೇಮಕ ಮಾಡಲಾಗಿದೆ.
ಕುಂದಾಪುರದ ಡಿವೈಎಸ್ಪಿಯಾಗಿ ಕಾರ್ಯನಿವರ್ಹಿಸುತ್ತಿರುವ ಬೆಳ್ಳಿಯಪ್ಪ ಅವರು ಪ್ರಕರಣದ ವಿಚಾರಣೆ ನಡೆಸಲಿದ್ದಾರೆ ಎಂದು ಉಡುಪಿ ಎಸ್ಪಿ ಅಕ್ಷಯ್ ಹಾಕೇ ಮಚ್ಚಿಂದ್ರ ಅವರು ತಿಳಿಸಿದ್ದಾರೆ.
ತನಿಖಾಧಿಕಾರಿಯನ್ನು ಬದಲು ಮಾಡುವಂತೆ ಎಬಿವಿಪಿ, ಬಿಜೆಪಿ ಆಗ್ರಹಿಸಿದ್ದವು. ಅಲ್ಲದೆ, ಪೊಲೀಸರು ಎಫ್ಐಆರ್ ದಾಖಲು ಮಾಡಲು ವಿಳಂಬ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿಯೂ ಸಾಕಷ್ಟು ಆಕ್ರೋಶಗಳು ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಅವರಿಗೆ ತನಿಖೆ ಜವಾಬ್ದಾರಿಯನ್ನ ನೀಡಲಾಗಿದೆ. ಅಲ್ಲದೆ, ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣ ಆಗಿರುವುದರಿಂದ, ವಿದ್ಯಾರ್ಥಿನಿಯರು, ಕಾಲೇಜು ಸಿಬ್ಬಂದಿ ಹೇಳಿಕೆ ದಾಖಲಿಸಲು ಸುಲಭವಾಗುವಂತೆ ತನಿಖಾ ತಂಡದಲ್ಲಿ ಹೆಚ್ಚುವರಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲು ಉಡುಪಿ ಎಸ್'ಪಿ ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


