ದೇವನಹಳ್ಳಿ: 3 ತಿಂಗಳ ಹಿಂದೆ ವಿವಾಹವಾಗಿದ್ದ ದಂಪತಿ ಕೃಷಿ ಹೊಂಡದಲ್ಲಿ ಬಿದ್ದು ಆತ್ಮಹತ್ಯೆ!
ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವದಂಪತಿ ಕೃಷಿ ಹೊಂಡಕ್ಕೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದಲ್ಲಿ ನಡೆದಿದೆ.

ದೇವನಹಳ್ಳಿ: ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವದಂಪತಿ ಕೃಷಿ ಹೊಂಡಕ್ಕೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದಲ್ಲಿ ನಡೆದಿದೆ.
ಕೆರೆಕೋಡಿ ನಿವಾಸಿ ರಮೇಶ್(26), ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜರುಗಹಳ್ಳಿ ಗ್ರಾಮದ ಸಹನಾ (22) ಮೃತ ದಂಪತಿ.
ದೇವನಹಳ್ಳಿಯ ರೆಡ್ಡಿ ಎಲೆಕ್ಟ್ರಾನಿಕ್ಸ್ ನಲ್ಲಿ ವ್ಯವಸ್ಥಾಪಕರಾಗಿ ಆಗಿ ಕೆಲಸ ಮಾಡುತ್ತಿದ್ದ ರಮೇಶ್, ಜರುಗಹಳ್ಳಿಯ ಸಹನಾ ಅವರನ್ನು ಪ್ರೀತಿಸಿ ವಿವಾಹವಾಗಿದ್ದರು.
ಬಾಡಿಗೆ ಮನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಇಬ್ಬರು, ಎರಡು ದಿನದಿಂದೆ ಬಿಜ್ಜವಾರ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದರು. ಆದರೆ ರಾತ್ರಿ ಮನೆಯಿಂದ ಹೊರಟವರು ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳೀಯರು ಮತ್ತು ಪೊಲೀಸರಿಂದ ನೀರಿನಲ್ಲಿದ್ದ ಮೃತದೇಹ ಹೊರತೆಗೆದು ತನಿಖೆ ನಡೆಸಿದ್ದಾರೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸೋಮವಾರ ಬೆಳಿಗ್ಗೆ ಮೃತದೇಹಗಳು ಪತ್ತೆಯಾಗಿದ್ದು, ತಕ್ಷಣ ತೋಟದ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ್ದ ವಿಜಯಪುರ ಪೊಲೀಸರು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


