ಆಗಸ್ಟ್ 5 ರಂದು ಕಲಬುರಗಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ: ಕೆ.ಜೆ. ಚಾರ್ಜ್
ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಆಗಸ್ಟ್ 5 ರಂದು ಕಲಬುರ್ಗಿಯಲ್ಲಿ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಭಾನುವಾರ ತಿಳಿಸಿದರು.

ಚಿಕ್ಕಮಗಳೂರು: ಪ್ರತಿಯೊಂದು ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಆಗಸ್ಟ್ 5 ರಂದು ಕಲಬುರ್ಗಿಯಲ್ಲಿ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಭಾನುವಾರ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಯೋಜನೆಯಡಿ ಜುಲೈ 1 ರಿಂದ ಬಳಕೆಯಾಗುವ ವಿದ್ಯುತ್‌ಗೆ ಫಲಾನುಭವಿಗಳು ಶುಲ್ಕ ಪಾವತಿಸಬೇಕಾಗಿಲ್ಲ ಎಂದರು.
ಗೃಹ ಜ್ಯೋತಿ ಯೋಜನೆ 2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಭರವಸೆ ನೀಡಿದ ಐದು ಭರವಸೆಗಳಲ್ಲಿ ಒಂದಾಗಿದೆ. 1.4 ಕೋಟಿಗೂ ಹೆಚ್ಚು ಗ್ರಾಹಕರು ಈಗಾಗಲೇ ಪ್ರಯೋಜನಕ್ಕಾಗಿ ಅರ್ಜಿ ಸಲ್ಲಿಸಿದ್ದು. ಜುಲೈ ತಿಂಗಳಿನ ವಿದ್ಯುತ್ ಶುಲ್ಕವನ್ನು ಈಗಾಗಲೇ ಪಾವತಿಸಿದವರಿಗೆ ಮರು ಪಾವತಿಸಲಾಗುತ್ತದೆ. ಬಾಕಿ ಇದ್ದಲ್ಲಿ ಅದಕ್ಕೆ ಸರಿಹೊಂದಿಸಲಾಗುತ್ತದೆ. ಜುಲೈ 1 ರಿಂದ 200 ಯೂನಿಟ್ ವರೆಗೂ ವಿದ್ಯುತ್ ಬಳಕೆಗೆ ಯಾವುದೇ ಶುಲ್ಕ ಇರುವುದಿಲ್ಲ ಎಂದರು.
ಅರ್ಹ ಗ್ರಾಹಕರ ಮೀಟರ್ ರೀಡಿಂಗ್ ಮತ್ತು ಲೆಕ್ಕಾಚಾರ ಪ್ರಕ್ರಿಯೆಯು ಜುಲೈ 1 ರಂದು ಪ್ರಾರಂಭವಾಗಿದೆ ಎಂದು ಸ್ಪಷ್ಟಪಡಿಸಿದ ಸಚಿವರು, ಯೋಜನೆ ಚಾಲನೆ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.
2022-23 ರ ಹಣಕಾಸು ವರ್ಷದ ಬಿಲ್ಲಿಂಗ್ ಕಳೆದ 10 ತಿಂಗಳ ಬಳಕೆಯ ಸರಾಸರಿಯನ್ನು ಆಧರಿಸಿದ್ದು, 200 ಯೂನಿಟ್ ವರೆಗೂ ವಿದ್ಯುತ್ ಬಳಸುವವರಿಗೆ ಶೇ.10 ರಷ್ಟು ಹೆಚ್ಚುವರಿ ಸಬ್ಸಿಡಿಯನ್ನು ಸರ್ಕಾರ ಪ್ರಕಟಿಸಿದೆ. ಆದಾಗ್ಯೂ 200-ಯೂನಿಟ್ ಮಿತಿಯನ್ನು ಮೀರಿದ ಗ್ರಾಹಕರು ಎಂದಿನಂತೆ ತಮ್ಮ ಬಿಲ್‌ಗಳನ್ನು ಪಾವತಿಸಬೇಕಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


