ಮೈಸೂರು ಬಳಿ ಭೀಕರ ಅಪಘಾತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ
ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಮೈಸೂರು: ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಇದನ್ನು ಓದಿ: ಮೈಸೂರು ಬಳಿ ಅಪಘಾತಕ್ಕೆ 10 ಮಂದಿ ಸಾವು: ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ಪರಿಹಾರ
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಶಿಕುಮಾರ್ ಅವರು ಚಿಕಿತ್ಸೆ ಫಲಿಸದೆ ಶುಕ್ರವಾರ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಕಳೆದ ಸೋಮವಾರ ಕೊಳ್ಳೇಗಾಲ - ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿತ್ತು. ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


