ರಾಜ್ಯ

ರಾಯಚೂರು: ಮುಸ್ಲಿಂ ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್; ಆರ್ ಎಸ್ ಎಸ್ ಕಾರ್ಯಕರ್ತನ ಬಂಧನ

ಮುಸ್ಲಿಂ ಮಹಿಳೆಯರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಆರೋಪದ ಮೇಲೆ ಪೊಲೀಸರು ಆರ್‌ಎಸ್‌ಎಸ್ ಕಾರ್ಯಕರ್ತನನ್ನು ಬಂಧಿಸಿದ್ದಾರೆ.

ರಾಯಚೂರು: ಮುಸ್ಲಿಂ ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್; ಆರ್ ಎಸ್ ಎಸ್ ಕಾರ್ಯಕರ್ತನ ಬಂಧನ
ಸಾಂದರ್ಭಿಕ ಚಿತ್ರ
Published On :

ರಾಯಚೂರು: ಮುಸ್ಲಿಂ ಮಹಿಳೆಯರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಆರೋಪದ ಮೇಲೆ  ಪೊಲೀಸರು ಆರ್‌ಎಸ್‌ಎಸ್ ಕಾರ್ಯಕರ್ತನನ್ನು ಬಂಧಿಸಿದ್ದಾರೆ.

ಪೋಸ್ಟ್ ವೈರಲ್ ಆದ ನಂತರ ಮುಸ್ಲಿಂ ಸಮುದಾಯದವರು ಗುರುವಾರ ಪ್ರತಿಭಟನೆ ನಡೆಸಿ ಅವರನ್ನು ಬಂಧಿಸುವಂತೆ ಒತ್ತಾಯಿಸಿದರು. ಪ್ರತಿಭಟನಾಕಾರರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆರೋಪಿಗಳ ಬಂಧನಕ್ಕೆ 24 ಗಂಟೆಗಳ ಗಡುವು ನೀಡಿದರು.

ಬಂಧಿತ ಆರ್‌ಎಸ್‌ಎಸ್ ಕಾರ್ಯಕರ್ತನನ್ನು ರಾಜು ತಂಬಾಕ್ ಎಂದು ಗುರುತಿಸಲಾಗಿದೆ. ಆರೋಪಿಯು ಮುಸ್ಲಿಂ ಮಹಿಳೆಯರನ್ನು "ಮಕ್ಕಳನ್ನು ಉತ್ಪಾದಿಸುವ ಯಂತ್ರಗಳು" ಎಂದು ಬಿಂಬಿಸುವ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆತನ ಪೋಸ್ಟ್‌ ವೈರಲ್ ಆಗಿದ್ದು, ಮುಸ್ಲಿಂ ಸಮುದಾಯವು ರಾಜು ತಂಬಾಕ್ ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾನೆ ಎಂದು ಆರೋಪಿಸಿದ್ದು, ಆತನನ್ನು ಕೂಡಲೇ ಬಂಧಿಸುವಂತೆ ಲಿಂಗಸೂಗೂರು ಪೊಲೀಸರನ್ನು ಒತ್ತಾಯಿಸಿದ್ದಾರೆ. ಘಟನೆಯಿಂದ ಲಿಂಗಸೂಗೂರು ಪಟ್ಟಣದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿತ್ತು. ಆದರೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.