ಚುನಾವಣೆಗೆ ಬಿಬಿಎಂಪಿ ಸಿದ್ಧತೆ: ಜುಲೈ 21ರಿಂದ ಮತದಾರರ ಪಟ್ಟಿ ಪರಿಶೀಲನೆ ಆರಂಭ
ಚುನಾವಣಾ ಆಯೋಗದ ಸೂಚನೆ ಬೆನ್ನಲ್ಲೇ ಚುನಾವಣೆಗೆ ಬಿಬಿಎಂಪಿ ಸಿದ್ಧತೆಗಳ ಆರಂಭಿಸಿದೆ.

ಬೆಂಗಳೂರು: ಚುನಾವಣಾ ಆಯೋಗದ ಸೂಚನೆ ಬೆನ್ನಲ್ಲೇ ಚುನಾವಣೆಗೆ ಬಿಬಿಎಂಪಿ ಸಿದ್ಧತೆಗಳನ್ನು ಆರಂಭಿಸಿದೆ.
2024ರ ಜ.1ಕ್ಕೆ ಉಲ್ಲೇಖಿಸಿದಂತೆ ಜ.5ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಬೇಕಿದೆ. ಹೀಗಾಗಿ, ಚುನಾವಣೆ ಅಧಿಕಾರಿಗಳು, ಸಹಾಯಕ ಚುನಾವಣೆ ಅಧಿಕಾರಿಗಳು, ಮತಗಟ್ಟೆ ಅಧಿಕಾರಿಗಳಿಗೆ ಜೂನ್ 1ರಿಂದ ಜುಲೈ 20ರವರೆಗೆ ತರಬೇತಿ ನೀಡಲಾಗುತ್ತದೆ.
ಮತಗಟ್ಟೆ ಅಧಿಕಾರಿಗಳು ಜುಲೈ 21 ರಿಂದ ಆ.21ರ ವರೆಗೆ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಆ.22ರಿಂದ ಸೆ.29ರ ವರೆಗೆ ಮತದಾರರ ಪಟ್ಟಿ ಪರಿಷ್ಕರಣೆ, ಮತಗಟ್ಟೆಗಳ ಆಯ್ಕೆಯ ಚಟುವಟಿಕೆಗಳು ನಡೆಯಲಿವೆ. ಸೆ.30ರಿಂದ ಅ.16ರ ವರೆಗೆ ಮತದಾರರ ಪಟ್ಟಿಯ ಕರಡು ಪ್ರತಿ ಸಿದ್ಧತೆ ನಡೆಯಲಿದೆ. ಅ.17ರಂದು ಮತದಾರರ ಕರಡು ಪಟ್ಟಿ ಪ್ರಕಟಿಸಲಾಗುತ್ತದೆ. ಅ.17ರಿಂದ ನ.30ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ.
ಎರಡು ಶನಿವಾರ ಮತ್ತು ಭಾನುವಾರಗಳಂದು ವಿಶೇಷ ಅಭಿಯಾನ ನಡೆಸಲಾಗುತ್ತದೆ. ಡಿ.26ರ ವೇಳೆಗೆ ಎಲ್ಲ ಆಕ್ಷೇಪಣೆ ಪರಿಶೀಲಿಸಿ, ಕ್ರಮ ಕೈಗೊಳ್ಳಲಾಗುತ್ತದೆ. 2024ರ ಜ.1ರಂದು ಮತದಾರರ ಅಂತಿಮ ಪಟ್ಟಿಯನ್ನು ಮುದ್ರಣಕ್ಕೆ ಕಳುಹಿಸಲಾಗುತ್ತದೆ. ಜ.5ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


