ರಾಜ್ಯ

ಬೆಂಗಳೂರು: ಕಾಂಗ್ರೆಸ್ ಪಕ್ಷ ಕೊಂಡಾಡಿದ ವ್ಯಕ್ತಿಯ ಮೇಲೆ ಹಲ್ಲೆ!

ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಕಾಂಗ್ರೆಸ್ ಪಕ್ಷವನ್ನು ಕೊಂಡಾಡಿದ ವ್ಯಕ್ತಿಯೊಬ್ಬನ ಮೇಲೆ ಬಿಯರ್ ಬಾಟಲಿಗಳಿಂದ ಹಲ್ಲೆ ನಡೆಸಿರುವ ಘಟನೆಯೊಂದು ನಗರದ ಅಮೃತಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರು: ಕಾಂಗ್ರೆಸ್ ಪಕ್ಷ ಕೊಂಡಾಡಿದ ವ್ಯಕ್ತಿಯ ಮೇಲೆ ಹಲ್ಲೆ!
ಸಂಗ್ರಹ ಚಿತ್ರ
Published On :

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಕಾಂಗ್ರೆಸ್ ಪಕ್ಷವನ್ನು ಕೊಂಡಾಡಿದ ವ್ಯಕ್ತಿಯೊಬ್ಬನ ಮೇಲೆ ಬಿಯರ್ ಬಾಟಲಿಗಳಿಂದ ಹಲ್ಲೆ ನಡೆಸಿರುವ ಘಟನೆಯೊಂದು ನಗರದ ಅಮೃತಹಳ್ಳಿಯಲ್ಲಿ ನಡೆದಿದೆ.

ಫುಡ್ ಡೆಲಿವರಿ ಏಜೆಂಟ್ ಆಗಿರುವ ವಿಕೆ.ರಂಗನಾಥ್ (33) ತಂದೆಯಾದ ಖುಷಿಗೆ ಪಾರ್ಟಿ ಏರ್ಪಡಿಸಿದ್ದರು. ಪಾರ್ಟಿಗೆ ರಂಗನಾಥ್ ಅವರ ಮೂವರು ರೂಮ್ ಮೇಟ್ ಗಳು ಕೂಡ ಭಾಗಿಯಾಗಿದ್ದರು. ಮದ್ಯಪಾನ ಮಾಡುವಾಗ ರಾಜಕೀಯ ವಿಚಾರಗಳ ಕುರಿತು ಚರ್ಚೆ ಆರಂಭವಾಗಿದೆ. ರೂಮ್ ಮೇಟ್ ಗಳು ಬಿಜೆಪಿ ಬೆಂಬಲಿಗರಾಗಿದ್ದರು. ಚರ್ಚೆ ವೇಳೆ ರಂಗನಾಥ್ ಕಾಂಗ್ರೆಸ್ ಪಕ್ಷವನ್ನು ಕೊಂಡಾಡಿದ್ದು, ಈ ವೇಳೆ ಮೂವರಿಗೆ ಸಿಟ್ಟು ಬಂದಿದೆ. ಕೂಡಲೇ ಬಿಯರ್ ಬಾಲಟಿಗಳಿಂದ ರಂಗನಾಥ್ ಮೇಲೆ ಹಲ್ಲೆ ನಡೆಸಿದ್ದಾರೆ.

ಘಟನೆ ಬಳಿಕ ರಂಗನಾಥ್ ಅವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಹಲ್ಲೆ ನಡೆಸಿದ ಮಧುಸೂಧನ್, ಮನೋಜ್ ಕುಮಾರ್ ಹಾಗೂ ಬಿ ಪ್ರಸಾದ್ ವಿರುದ್ಧ ದೂರು ದಾಖಲಿಸಿದ್ದಾರೆ. ದೂರ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಅಮೃತಹಳ್ಳಿ ಪೊಲೀಸರು ಐಪಿಸಿ ಸೆಕ್ಷನ್ 324 ಮತ್ತು ಇತರೆ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದರಂತೆ ಮೂವರ ಪೈಕಿ ಇಬ್ಬರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಮೂವರ ಜೊತೆಗೆ ಅಮೃತಹಳ್ಳಿಯ ಈಶ್ವರ ದೇವಸ್ಥಾನದ ಬಳಿ ವಾಸವಿದ್ದೆ. ಹಲ್ಲೆಯಿಂದಾಗಿ ಕುತ್ತಿಗೆಗೆ ಆರು ಹೊಲಿಗೆಗಳನ್ನು ಹಾಕಲಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದೇನೆ. ಇದೀಗ ಪ್ರತ್ಯೇಕವಾಗಿ ವಾಸವಿದ್ದೇನೆ. ಮೂವರು ಕೂಡ ಫುಡ್ ಡೆಲಿವರಿ ಏಜೆಂಟ್ ಗಳಾಗಿದ್ದರು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.