ಮಂಡ್ಯ: KSRTC ಬಸ್ನಲ್ಲಿ ಕಿರುಕುಳ, ಯುವಕನಿಗೆ ಹಿಗ್ಗಾಮುಗ್ಗ ಥಳಿಸಿದ ಯುವತಿ
KSRTC ಬಸ್ ನಲ್ಲಿ ಪ್ರಯಾಣಿಸುತ್ತಿರುವಾಗ ಕಿರುಕುಳ ನೀಡಿದ ಯುವಕನಿಗೆ ಯುವತಿಯೋರ್ವಳು ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಂಡ್ಯ: KSRTC ಬಸ್ ನಲ್ಲಿ ಪ್ರಯಾಣಿಸುತ್ತಿರುವಾಗ ಕಿರುಕುಳ ನೀಡಿದ ಯುವಕನಿಗೆ ಯುವತಿಯೋರ್ವಳು ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಂಡ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮಂಡ್ಯದಿಂದ ಪಾಂಡವಪುರಕ್ಕೆ ತೆರಳುವ ಬಸ್ನಲ್ಲಿ ಯುವತಿ ಒಬ್ಬಳೆ ಕುಳಿತಿದ್ದಳು. ಇದನ್ನು ಗಮನಿಸಿದ ಯುವಕ ಹಿಂದಿನ ಸೀಟಿನಿಂದ ಕೀಟಲೆ ಕೊಡಲು ಶುರು ಮಾಡಿದ್ದನು. ಇದರಿಂದ ಕೋಪಗೊಂಡ ಯುವತಿ ಕುಚೇಷ್ಟೆ ಮಾಡುತ್ತಿದ್ದ ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾಳೆ.
ಯುವಕನ ಟೀ ಶರ್ಟ್ ಹಿಡಿದು ಹಿಗ್ಗಾ ಮುಗ್ಗ ಕೆನ್ನೆಗೆ ಬಾರಿಸಿದ್ದಾಳೆ. ಇನ್ನು ಯುವತಿ ಯುವಕನಿಗೆ ಥಳಿಸಿರುವ ದೃಶ್ಯಗಳು ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಯುವತಿ ಕೈಯಲ್ಲಿ ಏಟು ತಿಂದ ಯುವಕ ಬಸ್ನಿಂದ ಇಳಿದು ಪರಾರಿಯಾಗಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


