ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆ ದುರ್ಮರಣ
ನಗರದಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಯಮರೂಪಿಯಾಗಿ ಬಂದ ಕೆಎಸ್ ಆರ್ ಟಿಸಿ ಬಸ್ ಮಹಿಳೆಯೊಬ್ಬರ ಜೀವ ಬಲಿ ಪಡೆದಿದೆ.

ಬೆಂಗಳೂರು: ನಗರದಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಯಮರೂಪಿಯಾಗಿ ಬಂದ ಕೆಎಸ್ ಆರ್ ಟಿಸಿ ಬಸ್ ಮಹಿಳೆಯೊಬ್ಬರ ಜೀವ ಬಲಿ ಪಡೆದಿದೆ. ಲತಾ (55) ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಹೆಬ್ಬಾಳ ಕೆಂಪಾಪುರದ ಲತಾ, ಪತಿ ಅನಂತರಾಮಕೃಷ್ಣರ ಜೊತೆಗೆ ಬೈಕ್ ನಲ್ಲಿ ಹೊರಟಿದ್ದಾಗ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ ಎಂದು ಉಪ್ಪಾರ ಪೇಟೆ ಸಂಚಾರ ಪೊಲೀಸರು ತಿಳಿಸಿದ್ದಾರೆ.
ಶೇಷಾದ್ರಿ ರಸ್ತೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಮೆಜೆಸ್ಟಿಕ್ ನಿಂದ ಕೆ.ಆರ್.ವೃತ್ತದತ್ತ ಹೊರಟಿದ್ದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಬೈಕ್ ಸಮೇತ ರಸ್ತೆ ಮೇಲೆ ಬಿದ್ದ ಲತಾ ಅವರ ತಲೆ ಮೇಲೆಯೇ ಬಸ್ಸಿನ ಚಕ್ರ ಹರಿದು ಹೋಗಿದೆ. ಇದರಿಂದಾಗಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅನಂತರಾಮಕೃಷ್ಣ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.
ಬಸ್ ಚಾಲಕನ ಅಜಾಗರೂಕತೆ ಹಾಗೂ ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೊಟಕ್ಕೆ ತಿಳಿದುಬಂದಿದೆ. ಬಸ್ ಜಪ್ತಿ ಮಾಡಿರುವ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


