ಕೊಡಗು: ನೀರು ಕುಡಿಯಲು ಬಂದು ಕೆರೆಗೆ ಬಿದ್ದಿದ್ದ ಕಾಡಾನೆ ರಕ್ಷಿಸಿದ ಅರಣ್ಯ ಇಲಾಖೆ
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕರಡ ಗ್ರಾಮದಲ್ಲಿ ಶನಿವಾರ ಇಲ್ಲಿನ ಕಾಫಿ ತೋಟದಲ್ಲಿನ ಕೆರೆಗೆ ಬಿದ್ದು ಮೇಲೆ ಬರಲಾಗದೆ ಒದ್ದಾಡುತ್ತಿದ್ದ ಕಾಡಾನೆಯನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ್ದಾರೆ.

ವಿರಾಜಪೇಟೆ: ತಾಲೂಕಿನ ಕರಡ ಗ್ರಾಮದಲ್ಲಿ ಶನಿವಾರ ಇಲ್ಲಿನ ಕಾಫಿ ತೋಟದಲ್ಲಿನ ಕೆರೆಗೆ ಬಿದ್ದು ಮೇಲೆ ಬರಲಾಗದೆ ಒದ್ದಾಡುತ್ತಿದ್ದ ಕಾಡಾನೆಯನ್ನು ಅರಣ್ಯಾಧಿಕಾರಿಗಳು ರಕ್ಷಿಸಿದ್ದಾರೆ.
ಕರಡ ಗ್ರಾಮದ ನಡಿಕೇರಿಯಂಡ ಐಯಣ್ಣ ಎಂಬುವವರ ತೋಟದಲ್ಲಿ ಈ ಘಟನೆ ನಡೆದಿದ್ದು, ಕಾಫಿ ಗಿಡಗಳಿಗೆ ನೀರುಣಿಸಲು ಕೆರೆ ತೋಡಲಾಗಿತ್ತು. ಈ ವೇಳೆ ಕಾಡಾನೆಗಳ ಗುಂಪು ಆಹಾರ ಅರಸಿ ತೋಟಕ್ಕೆ ಬಂದಿದ್ದು, ಅದರಲ್ಲಿ ಒಂದು ಕಾಡಾನೆ ಕೆರೆಗೆ ಬಿದ್ದಿತ್ತು.
25 ವರ್ಷದ ಆನೆ ಬಾಯಾರಿಕೆ ನೀಗಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಆಕಸ್ಮಿಕವಾಗಿ ಎಸ್ಟೇಟ್‌ನಲ್ಲಿದ್ದ ಕೆರೆಗೆ ಬಿದ್ದಿದೆ. ಆದರೆ, ಅಲ್ಲಿಂದ ಹೊರ ಬರಲು ಸಾಧ್ಯವಾಗಿಲ್ಲ. ಇದನ್ನು ಗಮನಿಸಿದ ಎಸ್ಟೇಟ್‌ನ ಕಾರ್ಮಿಕರು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದಾರೆ.
ಸ್ಥಳಕ್ಕೆ ದೌಡಾಯಿಸಿ ಅರಣ್ಯಾಧಿಕಾರಿಗಳು, ಆನೆ ಹೊರ ಬರಲು ಮಣ್ಣು ತೆಗೆಯುವ ಯಂತ್ರವನ್ನು ಬಳಸಿ ಕೆರೆಯಿಂದ ಮಾರ್ಗ ನಿರ್ಮಿಸಿದ್ದಾರೆ. ಈ ವೇಳೆ ಕೆರೆಯಿಂದ ಹೊರಬಂದ ಆನೆ, ಪಕ್ಕದಲ್ಲಿಯೇ ನಿಲ್ಲಿಸಿದ್ದ ಅರಣ್ಯಾಧಿಕಾರಿಗಳ ಜೀಪಿನತ್ತ ನುಗ್ಗಿತು.
ಅರಣ್ಯ ಇಲಾಖೆಯ ಸುಮಾರು 30 ಸಿಬ್ಬಂದಿ ಕಾಡಾನೆ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದು ಡಿಸಿಎಫ್ ಶರಣ ಬಸಪ್ಪ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


