ಕೆಎಸ್ಆರ್ ಟಿಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಮಹಿಳೆಯರು ತಮ್ಮ ಆಧಾರ್ ತೋರಿಸಬೇಕು
ಜೂನ್ 11 ರಿಂದ ಜಾರಿಗೆ ಬರಲಿರುವ ಸರ್ಕಾರದ ಶಕ್ತಿ ಯೋಜನೆಯಡಿ ಸರ್ಕಾರಿ ಸ್ವಾಮ್ಯದ ಎಲ್ಲಾ ಸಾರಿಗೆ ನಿಗಮಗಳ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಮಹಿಳೆಯರು ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ತೋರಿಸಬೇಕು.

ದಾವಣಗೆರೆ/ಚಿತ್ರದುರ್ಗ: ಜೂನ್ 11 ರಿಂದ ಜಾರಿಗೆ ಬರಲಿರುವ ಸರ್ಕಾರದ ಶಕ್ತಿ ಯೋಜನೆಯಡಿ ಸರ್ಕಾರಿ ಸ್ವಾಮ್ಯದ ಎಲ್ಲಾ ಸಾರಿಗೆ ನಿಗಮಗಳ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಮಹಿಳೆಯರು ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ತೋರಿಸಬೇಕು. ರಾಜ್ಯ ಸರ್ಕಾರ ಕರ್ನಾಟಕದ ನಿವಾಸಿಗಳಿಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ. ಹೀಗಾಗಿ ಮಹಿಳೆಯರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ತೋರಿಸಬೇಕಾಗಿದೆ.
ಮಹಿಳೆ ಕರ್ನಾಟಕ ಮೂಲದವಾರಿದ್ದು, ರಾಜ್ಯದ ಯಾವುದೇ ನಗರಕ್ಕೆ ತನ್ನ ವಿಳಾಸವನ್ನು ಬದಲಾಯಿಸಿದರೂ ಉಚಿತ ಪ್ರಯಾಣಕ್ಕೆ ಅರ್ಹರಾಗಿರುತ್ತಾರೆ. ಸರ್ಕಾರಿ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರು ಆಧಾರ್ ಕಾರ್ಡ್ ತೋರಿಬೇಕು ಮತ್ತು ಕಂಡಕ್ಟರ್ ಅವರಿಗೆ 'ಶೂನ್ಯ' ದರದ ಟಿಕೆಟ್ ನೀಡುತ್ತಾರೆ.
"ಶಕ್ತಿ ಯೋಜನೆಯ ಅನುಷ್ಠಾನದ ವಿಧಾನಗಳು ಕೆಎಸ್ಆರ್ ಟಿಸಿ ಪ್ರಧಾನ ಕಚೇರಿಯಿಂದ ನಮಗೆ ಇನ್ನೂ ಬಂದಿಲ್ಲ. ಸರ್ಕಾರದ ನಿರ್ದೇಶನದ ಆಧಾರದ ಮೇಲೆ ಯೋಜನೆಯನ್ನು ಜಾರಿಗೊಳಿಸಲಾಗುವುದು.
"ಮಹಿಳೆ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ ಅಥವಾ ಇತರ ಯಾವುದೇ ರಾಜ್ಯದವರಾಗಿದ್ದರೂ ಸಹ, ಅವರು ತಮ್ಮ ವಿಳಾಸವನ್ನು ಕರ್ನಾಟಕಕ್ಕೆ ವರ್ಗಾಯಿಸಿದರೆ ಉಚಿತ ಪ್ರಯಾಣಕ್ಕೆ ಅರ್ಹರು" ಎಂದು ಕೆಎಸ್ಆರ್ ಟಿಸಿ ವಿಭಾಗೀಯ ನಿಯಂತ್ರಕ ಸಿದ್ದೇಶ್ವರ ಹೆಬ್ಬಾಳ್ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.
"ಟಿಕೆಟ್ ನೀಡುವ ಯಂತ್ರಗಳನ್ನು ಮರುಮಾಪನ ಮಾಡಲಾಗುತ್ತಿದೆ ಮತ್ತು ಮಹಿಳಾ ಪ್ರಯಾಣಿಕರಿಗೆ ಟಿಕೆಟ್ ನೀಡುವ ಬಗ್ಗೆ ಕಂಡಕ್ಟರ್‌ಗಳಿಗೆ ತರಬೇತಿ ನೀಡಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವು ಚುನಾವಣೆಗೆ ಮುನ್ನ ಕಾಂಗ್ರೆಸ್ ನೀಡಿದ ಐದು ಭರವಸೆಗಳಲ್ಲಿ ಒಂದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


