ತುಮಕೂರು ಜಾತ್ರಾ ಮಹೋತ್ಸವದಲ್ಲಿ ನೂಕುನುಗ್ಗಲು; 30 ಜನರಿಗೆ ಗಾಯ
ಜಾತ್ರಾ ಮಹೋತ್ಸವದ ವೇಳೆ ನೂಕುನುಗ್ಗಲು ಶುರುವಾಗಿ 30 ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ತುಮಕೂರು: ಜಾತ್ರಾ ಮಹೋತ್ಸವದ ವೇಳೆ ನೂಕುನುಗ್ಗಲು ಶುರುವಾಗಿ 30 ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಮಾನಿನಕೆರೆ ಗ್ರಾಮದಲ್ಲಿ 35 ವರ್ಷಗಳ ಬಳಿಕ ರಾಮಲಿಂಗೇಶ್ವರ ಮತ್ತು ಚೌಡೇಶ್ವರಿ ಜಾತ್ರಾ ಮಹೋತ್ಸವ ನಡೆಸಲಾಗುತ್ತಿತ್ತು. ಜಾತ್ರೆಗೆ 50 ಸಾವಿರಕ್ಕೂ ಹೆಚ್ಚು ಜನರು ಆಗಮಿಸಿದ್ದರು.
ಹೆಚ್ಚು ಜನರು ಜಾತ್ರೆಗೆ ಸೇರಿದ್ದರಿಂದ ಸ್ಥಳದಲ್ಲಿ ನೂಕು ನುಗ್ಗಲು ಶುರುವಾಗಿದೆ. ಪರಿಣಾಮ 30 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಇಧೀಗ ಗಾಯಾಳುಗಳನ್ನು ತುರುವೇಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


