ಕಾಡಾನೆಯ ಫೋಟೋ-ವಿಡಿಯೊ ತೆಗೆಯಲೆಂದು ಹೋದ ಪ್ರವಾಸಿಗನಿಗೆ ಏನಾಯ್ತು ನೋಡಿ....
ಅಕ್ರಮವಾಗಿ ಕಾಡಿನ ಒಳಗೆ ಪ್ರವೇಶಿಸಿದ ವ್ಯಕ್ತಿಯನ್ನು ಕಾಡಾನೆ ಅಟ್ಟಾಡಿಸಿಕೊಂಡು ಬರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಚಾಮರಾಜನಗರ: ಅಕ್ರಮವಾಗಿ ಕಾಡಿನ ಒಳಗೆ ಪ್ರವೇಶಿಸಿದ ವ್ಯಕ್ತಿಯನ್ನು ಕಾಡಾನೆ ಅಟ್ಟಾಡಿಸಿಕೊಂಡು ಬರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಂಡೀಪುರ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಕೇರಳದ ಮುತ್ತಂಗ ವನ್ಯಜೀವಿಧಾಮದಲ್ಲಿ ಈ ಘಟನೆ ನಡೆದಿದೆ.
ಪ್ರವಾಸಿಗರೊಬ್ಬರು ಕ್ಯಾಮರಾ ಹಿಡಿದುಕೊಂಡು ಆನೆಯ ಫೋಟೋ ವಿಡಿಯೊ ತೆಗೆಯಲೆಂದು ಕಾಡಿನೊಳಗೆ ಪ್ರವೇಶಿಸಿದ್ದಾರೆ. ಆಗ ಕಾಡಾನೆ ಸಿಟ್ಟಿನಿಂದ ಅಟ್ಟಿಸಿಕೊಂಡು ಬಂದಿದ್ದು ಪ್ರವಾಸಿಗ ಕೂದಲೆಳೆ ಅಂತರದಲ್ಲಿ ಬಚಾವಾಗಿದ್ದಾರೆ.
ಅರಣ್ಯ ಇಲಾಖೆ ಈ ಘಟನೆ ಬಗ್ಗೆ ತನಿಖೆಗೆ ಆದೇಶ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


