ಬಾಡಿಗೆ ಭಾಷಣಕಾರರೆಲ್ಲ ಲೇಖಕರಾ? ಚಕ್ರವರ್ತಿ ಸೂಲಿಬೆಲೆ ಬರೆದಿರೋ ಪಠ್ಯ ತೆಗೆಯುತ್ತೇವೆ; ಅವರೇನು ಪಿಎಚ್ ಡಿ ಮಾಡಿದ್ದಾರಾ?
ನಾನು ಚಕ್ರವರ್ತಿ ಸೂಲಿಬೆಲೆ ಬರೆದಿರುವ ಪಠ್ಯ ಓದಿಲ್ಲ. ಆದರೂ ಅವರು ಬರೆದಿರುವ ಪಠ್ಯ ನಮ್ಮ ಮಕ್ಕಳು ಓದುವುದು ಬೇಡ. ಯಾವ ಆಧಾರದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಪಾಠ ಪುಸ್ತಕದಲ್ಲಿ ಸೇರ್ಪಡೆ ಮಾಡಿದ್ದಾರೆ

ಬೆಂಗಳೂರು: ನಾನು ಚಕ್ರವರ್ತಿ ಸೂಲಿಬೆಲೆ ಬರೆದಿರುವ ಪಠ್ಯ ಓದಿಲ್ಲ. ಆದರೂ ಅವರು ಬರೆದಿರುವ ಪಠ್ಯ ನಮ್ಮ ಮಕ್ಕಳು ಓದುವುದು ಬೇಡ. ಯಾವ ಆಧಾರದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಪಾಠ ಪುಸ್ತಕದಲ್ಲಿ ಸೇರ್ಪಡೆ ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಬಿಜೆಪಿ ಅವಧಿಯ ಪಠ್ಯ ಪರಿಷ್ಕರಣೆ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಡಿಗೆ ಭಾಷಣಕಾರರನ್ನೆಲ್ಲ ನೀವು ಲೇಖಕರು, ಸಾಹಿತಿಗಳು ಮಾಡಿದ್ದೀರಿ. ಅದನ್ನು ನಮ್ಮ ಮಕ್ಕಳು ಓದಬೇಕಾ? ಕರ್ನಾಟಕ ಸಾಹಿತ್ಯಕ್ಕೆ ಅಷ್ಟು ಬರ ಬಂದಿದೆಯಾ? ಯಾರು ಇವರೆಲ್ಲಾ? ವಾಟ್ಸಪ್ ಯೂನಿವರ್ಸಿಟಿಯಲ್ಲಿ ಓದಿರುವವರು ಇವರು. ಅವರೆಲ್ಲಾ ಪಠ್ಯ ರಚನೆ ಮಾಡಲು ಪ್ರಾರಂಭಿಸಿದ್ದಾರೆ.
ಅಂತಹ ಪಾಠ ನಮ್ಮ ಮಕ್ಕಳು ಕಲಿತರೆ ನಮ್ಮ ಮಕ್ಕಳ ಭವಿಷ್ಯ ಏನಾಗಬೇಕು ಎಂದು ಸೂಲಿಬೆಲೆ ವಿರುದ್ಧ ಕಿಡಿಕಾರಿದರು. ಚಕ್ರವರ್ತಿ ಸೂಲಿಬೆಲೆಯವರು ಭಗತ್‌ಸಿಂಗ್, ಸುಖದೇವ್ ಅವರ ಬಗ್ಗೆ ಬರೆದಿರುವುದು ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಭಗತ್ ಸಿಂಗ್ ಬಗ್ಗೆ ಅಪಾರವಾದ ಗೌರವವಿದೆ. ಅವರ ನಿಜವಾದ ಇತಿಹಾಸ ನಾವು ಹೇಳುತ್ತೇವೆ. ನಾನು ನಾಸ್ತಿಕ ಏಕೆ ಆಗಿದ್ದೇನೆ ಎಂಬ ಭಗತ್ ಸಿಂಗ್ ಪುಸ್ತಕವಿದೆ. ಅದನ್ನು ಚಕ್ರವರ್ತಿ ಸೂಲಿಬೆಲೆ ಓದಲಿ ಸಾಕು. ಇತಿಹಾಸ ತಿರುಚಿಲ್ಲದ ಪಾಠ ನಾವು ಇಡುತ್ತೇವೆ ಎಂದು ವಾಗ್ದಾಳಿ ನಡೆಸಿದರು.
ಸಾಹಿತಿಗಳ ಹಿನ್ನೆಲೆ ಇಲ್ಲದೇ ಬರೆದವರ ಪಠ್ಯ ಯಾಕೆ ಓದಬೇಕು? ಆಡಳಿತ ಪಕ್ಷಕ್ಕೆ ಹತ್ತಿರದವರಾಗಿದ್ದೆ ಎಂದು ಪಠ್ಯ ಹಾಕುವುದು ಸರಿನಾ? ನಾವು ಅದರ ವಿರುದ್ಧ ಇದ್ದೇವೆ. ನಮ್ಮ ಮಕ್ಕಳು ವಾಟ್ಸಪ್ ಯೂನಿವರ್ಸಿಟಿ ಓದಬೇಕಾ ಅಥವಾ ಒಳ್ಳೆಯ ಯೂನಿವರ್ಸಿಟಿ ಓದಬೇಕಾ ಎಂದು
ಚಕ್ರವರ್ತಿಗಿಂತ ಒಳ್ಳೆಯ ಸಾಹಿತಿಗಳು ನಮ್ಮಲ್ಲಿ ಇಲ್ಲವಾ? ಚಕ್ರವರ್ತಿ ಸೂಲಿಬೆಲೆ ವಾಸ್ತವ ಹೇಳುವ ವ್ಯಕ್ತಿ ಅಲ್ಲ. ಅವರು ಬರೆದಿರುವ ಪಠ್ಯ ನಾನು ಯಾಕೆ ಓದಲಿ? ನನಗೆ ಓದೋಕೆ ಸಾಕಷ್ಟಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


