ರಾಜ್ಯ

ಕಾರು ಅಪಘಾತ: ಪ್ರವಾಸಕ್ಕೆ ತೆರಳಿದ್ದ ಮೈಸೂರು ಬಿಜೆಪಿ ಮುಖಂಡ ಸ್ವಾಮಿಗೌಡ ಸಾವು

ತಮಿಳುನಾಡಿನ ಊಟಿಯಲ್ಲಿ ಗುರುವಾರ ನಡೆದ ಕಾರು ಅಪಘಾತದಲ್ಲಿ ಮೈಸೂರಿನ ಬಿಜೆಪಿ ಮುಖಂಡರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರರು ಗಾಯಗೊಂಡಿದ್ದಾರೆ.

ಕಾರು ಅಪಘಾತ: ಪ್ರವಾಸಕ್ಕೆ ತೆರಳಿದ್ದ ಮೈಸೂರು ಬಿಜೆಪಿ ಮುಖಂಡ ಸ್ವಾಮಿಗೌಡ ಸಾವು
ಸಾಂದರ್ಭಿಕ ಚಿತ್ರ
Published On :

ಮೈಸೂರು: ತಮಿಳುನಾಡಿನ ಊಟಿಯಲ್ಲಿ ಗುರುವಾರ ನಡೆದ ಕಾರು ಅಪಘಾತದಲ್ಲಿ ಮೈಸೂರಿನ ಬಿಜೆಪಿ ಮುಖಂಡರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರರು ಗಾಯಗೊಂಡಿದ್ದಾರೆ.

ಮೃತ ವ್ಯಕ್ತಿ ಮೈಸೂರು ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸ್ವಾಮಿಗೌಡ ಎಂದು ಗುರುತಿಸಲಾಗಿದೆ. ಬುಧವಾರದಂದು ಸ್ವಾಮಿಗೌಡ ಅವರು ತಮ್ಮ ಸ್ನೇಹಿತ ಜಗದೀಶ ಗೌಡ ಅವರ ಕುಟುಂಬ ಜೊತೆ ತಮಿಳುನಾಡಿನ ಊಟಿ ಪ್ರವಾಸಕ್ಕೆ ತೆರಳಿದ್ದರು.

ಕಾರಿನಲ್ಲಿ ಸ್ವಾಮಿಗೌಡ, ಜಗದೀಶ್​ ಗೌಡ, ಆತನ ಪತ್ನಿ ಮತ್ತು ಇಬ್ಬರು ಮಕ್ಕಳು ಪ್ರಯಾಣಿಸುತ್ತಿದ್ದರು. ಊಟಿ ಪ್ರವಾಸಕ್ಕೆ ಮುಗಿಸಿಕೊಂಡು ಮೈಸೂರಿಗೆ ತೆರಳುತ್ತಿದ್ದ ವೇಳೆ ಕೂಡ್ಲೂರು ಬಳಿ ಇವರು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಸ್ವಾಮಿಗೌಡ ತಲೆಗೆ ಬಲವಾದ ಪೆಟ್ಟು ಬಿದ್ದಿದೆ.

ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಸ್ವಾಮಿಗೌಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆದ್ರೆ ಜಗದೀಶ್​ ಗೌಡ ಕುಟುಂಬದವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತ ನಡೆದ ಕೂಡಲೇ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸುವ ಕಾರ್ಯ ಕೈಗೊಂಡಿದ್ದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.