ಮುಡಾ: ಮೂರು ತಿಂಗಳಿಂದ ಆಗಿರುವ ತೀರ್ಮಾನಗಳನ್ನು ತಡೆ ಹಿಡಿಯಲು ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಡಾ ಕ್ಕೆ ಸಂಬಂಧಿಸಿದಂತೆ ಮೂರು ತಿಂಗಳಿಂದ ಆಗಿರುವ ತೀರ್ಮಾನಗಳನ್ನು ತಡೆ ಹಿಡಿಯಲು ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು: ಮುಡಾಕ್ಕೆ ಸಂಬಂಧಿಸಿದಂತೆ ಮೂರು ತಿಂಗಳಿಂದ ಆಗಿರುವ ತೀರ್ಮಾನಗಳನ್ನು ತಡೆ ಹಿಡಿಯಲು ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕೆಡಿಪಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದು, ಮುಂಗಾರು ವಿಳಂಬವಾಗಿರುವುದರಿಂದ ಕುಡಿಯುವ ನೀರು, ಬಿತ್ತನೆ ಮಾಡಿರುವ ಬೆಳೆಗಳ ರಕ್ಷಣೆ ಮಾಡಲಿ ಸೂಚಿಸಲಾಗಿದೆ ಎಂದರು.
ಮಂಗಳೂರು, ಉಡುಪಿ, ರಾಯಚೂರು, ಕೊಪ್ಪಳಗಳಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗಬಾರದು ಎಂದು ತಿಳಿಸಲಾಗಿದೆ. ಮೈಸೂರಿನಲ್ಲಿ ನೀರಿನ ತೊಂದರೆಯಾದರೆ ಸೂಕ್ತ ಯೋಜನೆ ತಯಾರು ಮಾಡಬೇಕು ಎಂದು ಸೂಚಿಸಿದೆ. ಜನರೊಂದಿಗೆ ಸೌಜನ್ಯ ದಿಂದ ವರ್ತಿಸಬೇಕು. ಹಿರಿಯ ಅಧಿಕಾರಿಗಳು ಕೆಳಗಿನ ಕಚೇರಿಗಳಿಗೆ ಆಗಾಗ್ಗೆ ಭೇಟಿ ನೀಡಿ, ಕ್ಷೇತ್ರ ಭೇಟಿಯನ್ನೂ ಮಾಡಲು ಸೂಚಿಸಿದೆ ಎಂದರು. ಮತ್ತೊಮ್ಮೆ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಕೆಡಿಪಿ ಸಭೆ ನಡೆಸಲಿದ್ದಾರೆ ಎಂದರು.
ದಸರಾ ಪ್ರಾಧಿಕಾರ ರಚನೆಗೆ ಉನ್ನತ ಮಟ್ಟದ ಸಮಿತಿ ಸಭೆ ಕರೆದು ತೀರ್ಮಾನ ಕೈಗೊಳ್ಳಲಾಗುವುದು. ತಕ್ಷಣವೇ ಸಮಿತಿ ಸಭೆ ಕರೆಯಲಾಗುವುದು ಎಂದರು. ಕಾವೇರಿ ನೀರು ತಮಿಳುನಾಡಿಗೆ ನೀಡಲು ನಮ್ಮ ಬಳಿ ನೀರಿಲ್ಲ. ಕೊಡಬಾರದು ಎಂದೇನಿಲ್ಲ. ಆದರೆ ನಮಗೇ ಕೊರತೆಯಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


