ಗದಗ: ಯುವಕನ ಕತ್ತು ಸೀಳಿದ ಗಾಳಿಪಟದ ದಾರ; ಐದು ದಿನ ನರಳಿ ನರಳಿ ಪ್ರಾಣಬಿಟ್ಟ ಅಮಾಯಕ!
ಕಳೆದ ಜೂ.4ರಂದು ಕಾರ ಹುಣ್ಣಿಮೆ ವೇಳೆ ಹಾರಿಸಿದ ಗಾಳಿಪಟದ ಮಾಂಜಾ ದಾರವು ಸವಾರನ ಕುತ್ತಿಗೆ ಸಿಲುಕಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿರುವ ದಾರುಣ ಘಟನೆ ಗದಗದಲ್ಲಿ ನಡೆದಿದೆ.

ಗದಗ: ಕಳೆದ ಜೂ.4ರಂದು ಕಾರ ಹುಣ್ಣಿಮೆ ವೇಳೆ ಹಾರಿಸಿದ ಗಾಳಿಪಟದ ಮಾಂಜಾ ದಾರವು ಸವಾರನ ಕುತ್ತಿಗೆ ಸಿಲುಕಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿರುವ ದಾರುಣ ಘಟನೆ ಗದಗದಲ್ಲಿ ನಡೆದಿದೆ.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ನಾರಾಯಣ ದೇವರಕೆರೆ ನಿವಾಸಿ ರವಿ ಮೃತ ದುರ್ದೈವಿ. 5 ದಿನಗಳ ಹಿಂದೆ ಗಾಳಿಪಟದ ದಾರ ಸಿಲುಕಿ ಕುತ್ತಿಗೆ ಸೀಳಿಹೋಗಿತ್ತು. ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಐದು ದಿನಗಳಿಂದ ಸಾವು ಬದುಕಿನೊಂದಿಗೆ ಹೋರಾಟ ನಡೆಸಿದ್ದ ರವಿ. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ನಾರಾಯಣ ದೇವರಕೆರೆ ನಿವಾಸಿಯಾಗಿರುವ ರವಿ. ಗದಗ ನಗರದ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಕಳೆದ ಭಾನುವಾರ ಬೈಕ್ ಮೇಲೆ ಹೋಗುವಾಗ ಅಡ್ಡಲಾಗಿದ್ದ ಗಾಳಿಪಟದ ಮಾಂಜಾ ದಾರ ಕತ್ತಿಗೆ ಸಿಲುಕಿದೆ. ಬೈಕ್ ವೇಗಕ್ಕೆ ದಾರ ಯುವಕನ ಕತ್ತು ಸೀಳಿದೆ.
ಕಾರ ಹುಣ್ಣಿಮೆಯೆಂದು ಅವಳಿನಗರದಲ್ಲಿ ಗಾಳಿಪಟ ಹಾರಾಟ ನಡೆಸಲಾಗಿತ್ತು. ಹೀಗಾಗಿ ಎಲ್ಲೆಂದರಲ್ಲೇ ಗಾಳಿಪಟದ ದಾರಗಳು ಸಿಲುಕಿವೆ. ಇದನ್ನು ಗಮನಿಸದೇ ಬೈಕ್‌ಮೇಲೆ ಹೋಗಿದ್ದ ಯುವಕ ರವಿ.
ನಾವು ಪ್ಲಾಸ್ಟಿಕ್ ಗಾಳಿಪಟ ಮತ್ತು ಮಾಂಜಾ ದಾರವನ್ನು ನಿಷೇಧಿಸಿದ್ದೇವೆ. ಆದರೆ ಹಬ್ಬ ಹರಿದಿನಗಳಲ್ಲಿ ಗದಗಕ್ಕೆ ಬರುವ ವ್ಯಾಪಾರಿಗಳು ಮಾರಾಟ ಮಾಡುತ್ತಾರೆ. ನಾವು ವಿಷಯವನ್ನು ಪರಿಶೀಲಿಸುತ್ತಿದ್ದೇವೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳುತ್ತೇವೆ' ಎಂದು ಗದಗ ಜಿಲ್ಲಾಡಳಿತದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


