ಎಷ್ಟು ಖರ್ಚು ಮಾಡುತ್ತಿದ್ದೇವೆ ಎನ್ನುವುದು ಮುಖ್ಯವಲ್ಲ, ಯಾರಿಗೆ ನೀಡುತ್ತಿದ್ದೇವೆ ಅನ್ನೋದು ಮುಖ್ಯ- ಸಿಎಂ ಸಿದ್ದರಾಮಯ್ಯ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂಬ ಟೀಕೆಗಳು ವ್ಯಕ್ತವಾಗಿವೆ. ಇಂತಹ ಟೀಕೆಗಳಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೊಟ್ಟ ಮಾತಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂಬ ಟೀಕೆಗಳು ವ್ಯಕ್ತವಾಗಿವೆ. ಇಂತಹ ಟೀಕೆಗಳಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೊಟ್ಟ ಮಾತಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ನಮ್ಮ ಐದೂ ಗ್ಯಾರೆಂಟಿಗಳ ಜಾರಿಗೆ 59,000 ಕೋಟಿ ರೂ.ಗಳ ಅಗತ್ಯವಿದೆ. ಎಷ್ಟು ಹಣ ಖರ್ಚು ಮಾಡುತ್ತಿದ್ದೇವೆ ಎನ್ನುವುದು ಮುಖ್ಯವಲ್ಲ, ಯಾರಿಗೆ ನೀಡುತ್ತಿದ್ದೇವೆ ಎನ್ನುವುದು ಮುಖ್ಯ ಎಂದು ಹೇಳುವ ಮೂಲಕ ಸರ್ಕಾರದ ನಡೆಯುನ್ನು ಸಮರ್ಥಿಸಿಕೊಂಡಿದ್ದಾರೆ.
10 ಕೆಜಿ ಆಹಾರಧಾನ್ಯವನ್ನು ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡುದಾರರಿಗೆ ನೀಡುವ ಭರವಸೆ ನೀಡಿದ್ದೇವೆ. ಇದಕ್ಕೆ 10,100 ಕೋಟಿ ರೂ.ಗಳ ಅಗತ್ಯವಿದೆ. ಕರ್ನಾಟಕ ಹಸಿವು ಮುಕ್ತ ರಾಜ್ಯವಾಗಲೇಬೇಕು. ಹಸಿವಿನ ಕಷ್ಟ ಊಟವಿಲ್ಲದವರಿಗೆ ತಿಳಿಯುತ್ತದೆ. ಹೊಟ್ಟೆ ತುಂಬಿ ಅಜೀರ್ಣ ಮಾಡಿಕೊಂಡವರಿಗೆ ತಿಳಿದಿರುವುದಿಲ್ಲ ಎಂದಿದ್ದಾರೆ.
ಅನೇಕ ಮುಂದುವರೆದ ದೇಶಗಳಲ್ಲಿ ಮಹಿಳೆಯರ ಪಾಳ್ಗೊಳ್ಳುವಿಕೆ ಪ್ರಮಾಣ ಭಾರತಕ್ಕಿಂತ ಸಾಕಷ್ಟು ಹೆಚ್ಚಿದೆ, ಅಮೆರಿಕಾದಲ್ಲಿ ಶೇ 53% ರಷ್ಟು, ಚೈನಾ ದಲ್ಲಿ ಶೇ 54 ರಷ್ಟು, ಆಸ್ಟ್ರೇಲಿಯಾದಲ್ಲಿ ಶೇ 57, ಇಂಡೋನೇಶಿಯಾದಲ್ಲಿ ಶೇ 57 ರಷ್ಟು, ಬಾಂಗ್ಲಾದೇಶದಲ್ಲಿ ಶೇ 30 ರಷ್ಟು ಮಹಿಳೆಯರು ಸಾರ್ವಜನಿಕ ಕ್ಷೇತ್ರಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಆದರೆ ಭಾರತದಲ್ಲಿ ಕೇವಲ 24 ರಷ್ಟು ಮಹಿಳೆಯರು ಮಾತ್ರ ಪಾಲ್ಗೊಳ್ಳುತ್ತಿದ್ದಾರೆ. ಯಾವ ದೇಶಗಳಲ್ಲಿ ಹೆಚ್ಚು ಮಹಿಳೆಯರು ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾರೆ ಆ ದೇಶ ಅಭಿವೃದ್ಧಿಯಾಗುತ್ತದೆ. ಮಹಿಳೆಯರಿಗೆ ಶಕ್ತಿ ತುಂಬಿದಾಗ ಸಮಾಜದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಗಳನ್ನು ಕ್ರಮೇಣ ಅಳಿಸಲು ಸಾಧ್ಯ ಎಂದು ಅವರು ತಿಳಿಸಿದ್ದಾರೆ.
ಗೃಹ ಜ್ಯೋತಿ ಯೋಜನೆ ಜುಲೈ 1 ರಿಂದ ಜಾರಿಗೆ ಬರುತ್ತಿದೆ. ಎಲ್ಲಾ ಜಾತಿ ಮತ್ತು ಧರ್ಮದ ಬಡವರಿಗೆ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ನಮಗೆ ಯಾವುದೇ ಜಾತಿ ಧರ್ಮ ಇಲ್ಲ. ನಾವು ಹಿಂದೆ ನುಡಿದಂತೆ ನಡೆದಿದ್ದೇವೆ. ಹಿಂದಿನ ಬಾರಿ 165 ರಲ್ಲಿ 158 ಭರವಸೆಗಳನ್ನು ಈಡೇರಿಸಿ ಕೊಟ್ಟ ಮಾತಿನಂತೆ ನಡೆದಿದ್ದೇವೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


