ಮೈಸೂರಿನಲ್ಲಿ ಸಿಕ್ಕಿಬಿದ್ದ ಮೊಬೈಲ್ ಕಳ್ಳನಿಗೆ ಥಳಿತ
ವ್ಯಕ್ತಿಯೊಬ್ಬನಿಂದ ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದ ಖದೀಮನ ಹಿಡಿದ ಸಾರ್ವಜನಿಕರು ಆತನಿಗೆ ಥಳಿಸಿ, ಪೊಲೀಸರ ವಶಕ್ಕೆ ನೀಡಿರುವ ಘಟನೆ ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಬಳಿ ನಡೆದಿದೆ.

ಮೈಸೂರು: ವ್ಯಕ್ತಿಯೊಬ್ಬನಿಂದ ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದ ಖದೀಮನ ಹಿಡಿದ ಸಾರ್ವಜನಿಕರು ಆತನಿಗೆ ಥಳಿಸಿ, ಪೊಲೀಸರ ವಶಕ್ಕೆ ನೀಡಿರುವ ಘಟನೆ ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಬಳಿ ನಡೆದಿದೆ.
ಕುವೆಂಪುನಗರದ ನಿವಾಸಿ ಶಿವಣ್ಣ ಎಂಬುವರು ಹಾರ್ಡಿಂಜ್ ವೃತ್ತದಿಂದ ಚಾಮರಾಜ ವೃತ್ತದ ಕಡೆಗೆ ಫೋನ್ ನಲ್ಲಿ ಮಾತನಾಡುತ್ತಾ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅವರನ್ನು ಹಿಂಬಾಲಿಸಿಕೊಂಡು ಬಂದಿರುವ ಇಬ್ಬರು ಆರೋಪಿಗಳು, ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದಾರೆ.
ಈ ವೇಳೆ ಇಬ್ಬರ ಪೈಕಿ ಓರ್ವ ಆರೋಪಿಯನ್ನು ಹಿಡಿಯುವಲ್ಲಿ ಶಿವಣ್ಣ ಅವರು ಯಶಸ್ವಿಯಾಗಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಇತರರು ಶಿವಣ್ಣ ಅವರಿಗೆ ಸಾಥ್ ನೀಡಿದ್ದು, ಮತ್ತೊರ್ವ ಆರೋಪಿಯನ್ನೂ ಹಿಡಿದು ಥಳಿಸಿದ್ದಾರೆ. ಬಳಿಕ ಇಬ್ಬರು ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


