ಕೊಪ್ಪಳ: ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ!
ಕಲುಷಿತ ನೀರು ಸೇವಿಸಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ಪರಿಹಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ.

ಕೊಪ್ಪಳ: ಕಲುಷಿತ ನೀರು ಸೇವಿಸಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ಪರಿಹಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ.
ಮೃತರ ಕುಟುಂಬಸ್ಥರನ್ನು ಭೇಟಿಯಾದ ಶಿವರಾಜ್ ತಂಗಡಗಿ ಅವರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಪರಿಹಾರ ಘೋಷಣೆ ಮಾಡಿದ್ದೇನೆ. ಒಂದು ವಾರದೊಳಗೆ ಅವರಿಗೆ ಪರಿಹಾರ ನೀಡುತ್ತೇವೆ ಎಂದರು.
ಜಲ ಜೀವನ್ ಕಾಮಗಾರಿ ವೇಳೆ ಕೆಲ ಲೋಪಗಳಾಗಿದ್ದು ಇದರಿಂದಾಗಿ ಗ್ರಾಮದಲ್ಲಿ ನೀರು ಕಲುಷಿತವಾಗಿದೆ. ಹೀಗಾಗಿ ಈ ನೀರು ಸೇವಿಸಿ ಮೂವರು ಸಾವನ್ನಪ್ಪಿದ್ದಾರೆ. ಮೃತರಿಗೆ ಒಂದು ವಾರದಲ್ಲಿ 2 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಶಿವರಾಜ್ ತಂಗಡಗಿ ಹೇಳಿದ್ದಾರೆ.
ಬಸರಿಹಾಳ್ ಗ್ರಾಮದ ಹೊನ್ನಮ್ಮ ಶಿವಪ್ಪ (65ವ) ಎಂಬ ವೃದ್ಧೆ ಹಾಗೂ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದ 10 ವರ್ಷದ ನಿರ್ಮಲಾ ಈರಪ್ಪ ಮೃತಪಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


