ರಾಜ್ಯ

ಉಡುಪಿಯಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ಇಬ್ಬರು ಶಿಕ್ಷಕರು ಸಾವು, ಮತ್ತೊಬ್ಬರಿಗೆ ಗಾಯ

ಸೀತಾನದಿ ಜಕ್ಕನಮಕ್ಕಿ ಬಳಿ ಭಾನುವಾರ ನಡೆದ ಭೀಕರ ಕಾರು ಅಪಘಾತದಲ್ಲಿ ಇಬ್ಬರು ಶಿಕ್ಷಕರು ಸಾವಿಗೀಡಾಗಿದ್ದು, ಮತ್ತೋರ್ವ ಶಿಕ್ಷಕರಿಗೆ ಗಂಭೀರ ಗಾಯಗಳಾಗಿವೆ. ಮೃತರನ್ನು ಸುಬ್ಬಣ್ಣ ಗಾಣಿಗ ಮತ್ತು ಸೋಮಶೇಖರ್ ಎಂದು ಗುರುತಿಸಲಾಗಿದೆ.

ಉಡುಪಿಯಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ಇಬ್ಬರು ಶಿಕ್ಷಕರು ಸಾವು, ಮತ್ತೊಬ್ಬರಿಗೆ ಗಾಯ
ಸಾಂದರ್ಭಿಕ ಚಿತ್ರ
Published On :

ಉಡುಪಿ: ಸೀತಾನದಿ ಜಕ್ಕನಮಕ್ಕಿ ಬಳಿ ಭಾನುವಾರ ನಡೆದ ಭೀಕರ ಕಾರು ಅಪಘಾತದಲ್ಲಿ ಇಬ್ಬರು ಶಿಕ್ಷಕರು ಸಾವಿಗೀಡಾಗಿದ್ದು, ಮತ್ತೋರ್ವ ಶಿಕ್ಷಕರಿಗೆ ಗಂಭೀರ ಗಾಯಗಳಾಗಿವೆ. 

ಮೃತರನ್ನು ಸುಬ್ಬಣ್ಣ ಗಾಣಿಗ ಮತ್ತು ಸೋಮಶೇಖರ್ ಎಂದು ಗುರುತಿಸಲಾಗಿದೆ.

ಉಡುಪಿಯಿಂದ ಆಗುಂಬೆಗೆ ತೆರಳುತ್ತಿದ್ದ ಬಸ್ ಹಾಗೂ ಚೆನ್ನಗಿರಿಯಲ್ಲಿ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ಉಡುಪಿಗೆ ವಾಪಸಾಗುತ್ತಿದ್ದ ಶಿಕ್ಷಕರು ಪ್ರಯಾಣಿಸುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.

ಕಾರಿನಲ್ಲಿದ್ದ ಮತ್ತೊಬ್ಬ ಶಿಕ್ಷಕ ಸುದರ್ಶನ್ ಅವರಿಗೆ ತೀವ್ರ ಗಾಯಗಳಾಗಿದ್ದು, ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.