ರಾಜ್ಯ

ಚಿಕ್ಕಮಗಳೂರು: ಸಿಡಿಲು ಬಡಿದು ಒಬ್ಬರು ಸಾವು, ನಾಲ್ವರಿಗೆ ಗಾಯ

ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮೃತನನ್ನು ತರಿಕೆರೆ ತಾಲೂಕ್ ಭಾವಿಕೆರ ಗ್ರಾಮದ ಮುಕೇಶ್‌ (40) ಎಂದು ಗುರುತಿಸಲಾಗಿದೆ.

ಚಿಕ್ಕಮಗಳೂರು: ಸಿಡಿಲು ಬಡಿದು ಒಬ್ಬರು ಸಾವು, ನಾಲ್ವರಿಗೆ ಗಾಯ
ಸಿಡಿಲು ಬಡಿದು ಸಾವನ್ನಪ್ಪಿದ ವ್ಯಕ್ತಿ
Published On :

ಚಿಕ್ಕಮಗಳೂರು: ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮೃತನನ್ನು ತರಿಕೆರೆ ತಾಲೂಕ್ ಭಾವಿಕೆರ ಗ್ರಾಮದ ಮುಕೇಶ್‌ (40) ಎಂದು ಗುರುತಿಸಲಾಗಿದೆ. 

ದೇವರ ದರ್ಶನ ಪಡೆದ ನಂತರ ಊರಿಗೆ ವಾಪಸ್ಸಾಗಲು ಮುಂದಾದಾಗ ಜೋರಾಗಿ ಮಳೆ ಬಂದಿದೆ. ರೂಮಿನ ಹೊರಗೆ ಕಾಯುತ್ತ ನಿಂತಿದ್ದ ಸಮಯದಲ್ಲಿ ಸಿಡಿಲು ಬಡಿದಿದೆ.ತೀವ್ರ ಅಸ್ವಸ್ಥಗೊಂಡ ಮುಕೇಶ್‌ ಅವರನ್ನು ಮೊದಲು ಯಗಟಿ ಆಸ್ಪತ್ರೆಗೆ ನಂತರ ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ. ಎರಡೂವರೆ ವರ್ಷದ ಹಿಂದೆ ಕಾವ್ಯ ಅವರನ್ನು ಮುಕೇಶ್‌ ಮದುವೆಯಾಗಿದ್ದರು.

ಮುಕೇಶ್ ಹಾಗೂ ಸಂಬಂಧಿಕರು ದೇವಸ್ಥಾನದ ಹೊರಗಡೆ ನಿಂತಿದಾಗ ದಿಢೀರನೇ ಸಿಡಿಲು ಬಡಿದ್ದು ಮೃತಪಟ್ಟಿದ್ದಾರೆ. ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಾಳುಗಳು ಕಡೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಮನೆಗೆ ವಾಪಸ್ಸಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.