ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನ: ಜಾಗೃತಿ ಜಾಥಾಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಇಂದು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ನಗರದ ಎಂ.ಜಿ ರಸ್ತೆಯ ಮಹಾತ್ಮಾ ಗಾಂಧಿ ಪ್ರತಿಮೆ ಬಳಿ ಆಯೋಜಿಸಿದ ಜಾಗೃತಿ ಜಾಥಾಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ಬೆಂಗಳೂರು: ಇಂದು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನವನ್ನಾಗಿ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ನಗರದ ಎಂ.ಜಿ ರಸ್ತೆಯ ಮಹಾತ್ಮಾ ಗಾಂಧಿ ಪ್ರತಿಮೆ ಬಳಿ ಆಯೋಜಿಸಿದ ಜಾಗೃತಿ ಜಾಥಾಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಬಾಲ ಕಾರ್ಮಿಕರ ನೇಮಕಾತಿ ಶಿಕ್ಷಾರ್ಹ ಅಪರಾಧವಾಗಿದ್ದು ಈ ಕುರಿತು ಸಾರ್ವಜನಿಕರು, ಪೋಷಕರು ಹಾಗೂ ಉದ್ದಿಮೆದಾರರಿಗೆ ಈ ಕುರಿತ ಜಾಗೃತಿ ಅಗತ್ಯ ಎಂದರು.
ಪೋಷಕರು, ಮಾತ್ರವಲ್ಲದೆ ಉದ್ಯಮ ನಡೆಸುವವರೂ ಈ ಬಗ್ಗೆ ಜಾಗೃತರಾಗಬೇಕು. ಈ ನಿಟ್ಟಿನಲ್ಲಿ ಪ್ರಮಾಣವಚನ ಬೋಧನೆ ಮಾಡಲಾಗಿದೆ. ಮಕ್ಕಳು ಕಲಿಯುವ ವಯಸ್ಸಿನಲ್ಲಿ ದುಡಿಮೆ ಮಾಡಿದರೆ ವಿದ್ಯಾಭ್ಯಾಸದಿಂದ ವಂಚಿತರಾಗುತ್ತಾರೆ. ಎಲ್ಲರೂ ವಿದ್ಯೆ ಕಲಿಯಬೇಕು ಅದು ಮೂಲಭೂತ ಹಕ್ಕು ಎಂದು ಸಂವಿಧಾನ ಹೇಳುತ್ತದೆ ಎಂದು ಮುಖ್ಯಮಂತ್ರಿ ನುಡಿದರು.
18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ತೆಗೆದುಕೊಳ್ಳಬಾರದು. ಒಂದು ವೇಳೆ ಕೆಲಸ ಕ್ಕೆ ತೆಗೆದುಕೊಂಡರೆ ಅದು ಕಾನೂನಿಗೆ ವಿರುದ್ಧ. ಅವರ ಮೇಲೆ ಕಾನೂನಿನ ಕ್ರಮ ತೆಗೆದುಕೊಳ್ಳಬಹುದು. ಜಾಗೃತಿ ಮೂಡಿಸುವುದು ಹಾಗೂ ದುರುದ್ದೇಶದಿಂದ ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


