ಸ್ಯಾಂಡಲ್ ವುಡ್ ಚಿತ್ರ ನಿರ್ಮಾಪಕನ ವಿರುದ್ಧ ವಂಚನೆ, ಬೆದರಿಕೆ ಆರೋಪ
ಸಾಲ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನಿರ್ಮಾಪಕರೊಬ್ಬರು ತಮ್ಮ ಸಹೋದರನಿಗೆ ವಂಚಿಸಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಸಾಲ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನಿರ್ಮಾಪಕರೊಬ್ಬರು ತಮ್ಮ ಸಹೋದರನಿಗೆ ವಂಚಿಸಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಟ ಕಮ್ ನಿರ್ದೇಶಕ ರೂಪೇಶ್ ಜಿ ರಾಜ್ ಅವರು ಕೆಲವು ಕನ್ನಡ ಚಲನಚಿತ್ರಗಳನ್ನು ನಿರ್ಮಿಸಿರುವ ತಮ್ಮ ಸಹೋದರ ಗಿರೀಶ್ ಜಿ ರಾಜ್ ವಿರುದ್ಧ ದೂರು ದಾಖಲಿಸಿದ್ದಾರೆ.
ಕೆಲವು ವರ್ಷಗಳ ಹಿಂದೆ ಸಿನಿಮಾ ನಿರ್ಮಾಣಕ್ಕಾಗಿ ತನ್ನ ಸಹೋದರ ತನ್ನಿಂದ 33 ಲಕ್ಷ ಮತ್ತು ತನ್ನ ಮೂವರು ಸ್ನೇಹಿತರಿಂದ 1.10 ಕೋಟಿ ಸಾಲ ಪಡೆದು, ಅದನ್ನು ಹಿಂದಿರುಗಿಸುವ ಭರವಸೆ ನೀಡಿದ್ದರು ರೂಪೇಶ್ ದೂರಿನಲ್ಲಿ ತಿಳಿಸಿದ್ದಾರೆ.
ಆದರೂ ಮರುಪಾವತಿ ಮಾಡದ ಕಾರಣ, ಸಾಲ ತೀರಿಸುವಂತೆ ರೂಪೇಶ್ ಅವರ ಮನೆಗೆ ಭೇಟಿ ನೀಡಿದಾಗ ಬೆದರಿಕೆ ಹಾಕಿದ್ದರು. ಗಿರೀಶ್ ಅವರ ಸ್ನೇಹಿತರು ಕೂಡ ರೂಪೇಶ್‌ಗೆ ದೂರವಾಣಿ ಮೂಲಕ ಬೆದರಿಕೆ ಹಾಕಿದ್ದಾರೆ ಮತ್ತು ಅವರು ತಮ್ಮ ಸಹೋದರನಿಗೆ ಯಾವುದೇ ಹಣವನ್ನು ಸಾಲವಾಗಿ ನೀಡಿಲ್ಲ ಎಂದು ಲಿಖಿತವಾಗಿ ಘೋಷಿಸುವಂತೆ ಒತ್ತಾಯಿಸಿದ್ದಾರೆ ಎಂದು ದೂರಿಲ್ಲಿ ಉಲ್ಲೇಖಿಸಲಾಗಿದೆ.
ಪೊಲೀಸರು ಗಿರೀಶ್ ಮತ್ತು ಆತನ ಮೂವರು ಸ್ನೇಹಿತರ ವಿರುದ್ಧ ವಂಚನೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


