ಕಲುಷಿತ ನೀರು ದುರ್ಘಟನೆ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ, ತನಿಖೆಗೆ ಆದೇಶ
ಕೊಪ್ಪಳ ಜಿಲ್ಲೆ ಸೇರಿ ಎಲ್ಲೆಲ್ಲಿ ಕಲುಷಿತ ನೀರು ಕುಡಿದು ಜನರ ಆರೋಗ್ಯ ಮತ್ತು ಜೀವಕ್ಕೆ ಸಮಸ್ಯೆ ಆಗಿದೆಯೋ ಆ ಬಗ್ಗೆ ವಿಶೇಷ ತಂಡ ರಚಿಸಿ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೋಮವಾರ ಸೂಚನೆ ನೀಡಿದ್ದಾರೆ.

ಬೆಂಗಳೂರು: ಕೊಪ್ಪಳ ಜಿಲ್ಲೆ ಸೇರಿ ಎಲ್ಲೆಲ್ಲಿ ಕಲುಷಿತ ನೀರು ಕುಡಿದು ಜನರ ಆರೋಗ್ಯ ಮತ್ತು ಜೀವಕ್ಕೆ ಸಮಸ್ಯೆ ಆಗಿದೆಯೋ ಆ ಬಗ್ಗೆ ವಿಶೇಷ ತಂಡ ರಚಿಸಿ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೋಮವಾರ ಸೂಚನೆ ನೀಡಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ಇಂದು ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ಸಭೆಯಲ್ಲಿ ಕಲುಷಿತ ನೀರು ಸೇವಿಸಿ ಸಾವಿಗೀಡಾದ ಪ್ರಕರಣ ಸಂಭವಿಸಿದರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳನ್ನು ಹೊಣೆ ಮಾಡಿ, ಅವರನ್ನು ಅಮಾನತು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಮೊದಲು ಕಲುಷಿತ ನೀರು ಸೇವಿಸಿ ಅನಾಹುತ ಸಂಭವಿಸಿದಾಗಲೇ ಏಕೆ ಎಚ್ಚೆತ್ತುಕೊಳ್ಳಲಿಲ್ಲ? ಮತ್ತೆ ಘಟನೆ ಮರುಕಳಿಸಿದೆ. ನೀವು ಏನು ಮಾಡುತ್ತಿದ್ದೀರಿ? ಕಚೇರಿಯಲ್ಲಿ ಕುಳಿತು ಕೆಲಸ ಮಾಡಬಾರದು. ಸ್ಥಳಕ್ಕೆ ಭೇಟಿ ನೀಡಿ ಸಮಗ್ರವಾಗಿ ಅಧ್ಯಯನ ನಡೆಸಿ, ಮತ್ತೆ ಕಲುಷಿತ ನೀರಿನ ಅನಾಹುತ ಆಗಬಾರದು. ಮತ್ತೆ ಮರುಕಳಿಸಿದರೆ ನೀವೇ ಹೊಣೆ ಆಗುತ್ತೀರಿ. ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಇದೇ ವೇಳೆ ಕೊಪ್ಪಳ ಜಿಲ್ಲೆ ಸೇರಿ ಎಲ್ಲೆಲ್ಲಿ ಕಲುಷಿತ ನೀರು ಕುಡಿದು ಜನರ ಆರೋಗ್ಯ ಮತ್ತು ಜೀವಕ್ಕೆ ಸಮಸ್ಯೆ ಆಗಿದೆಯೋ ಆ ಬಗ್ಗೆ ತನಿಖೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು.
ಈ ವೇಳೆ ಮಾತನಾಡಿದ ಮುಖ್ಯ ಕಾರ್ಯದರ್ಶಿಗಳು, ಕೊಪ್ಪಳ ಜಿಲ್ಲೆ ಸೇರಿ ಎಲ್ಲೆಲ್ಲಿ ಕಲುಷಿತ ನೀರು ಕುಡಿದು ಜನರ ಆರೋಗ್ಯ ಮತ್ತು ಜೀವಕ್ಕೆ ಸಮಸ್ಯೆ ಆಗಿರುವ ಬಗ್ಗೆ ಈಗಾಗಲೇ ಸ್ಥಳೀಯವಾಗಿ ತನಿಖೆ ನಡೆಯುತ್ತಿದೆ. ಬೆಂಗಳೂರು ಕೇಂದ್ರದಿಂದಲೂ ತಂಡವನ್ನು ಕಳುಹಿಸಿ ತನಿಖೆ ನಡೆಸಲಾಗುವುದು. ಎರಡೂ ವರದಿಗಳು ಬಂದ ಬಳಿಕ ತಪ್ಪಿತಸ್ಥರನ್ನು ಹೊಣೆ ಮಾಡಿ, ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಸಚಿವರಾದ ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


