ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಜನಾರ್ದನ ರೆಡ್ಡಿ ಆಸ್ತಿ ಜಪ್ತಿ ಮಾಡಿ: ಸಿಬಿಐ ವಿಶೇಷ ಕೋರ್ಟ್ ಆದೇಶ
ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಶಾಸಕ ಜನಾರ್ದನ ರೆಡ್ಡಿ ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿಗೆ ಸೇರಿದ ಆಸ್ತಿ ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.

ಬೆಂಗಳೂರು: ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಶಾಸಕ ಜನಾರ್ದನ ರೆಡ್ಡಿ ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿಗೆ ಸೇರಿದ 82 ಸ್ಥಿರಾಸ್ತಿ ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.
ಜನಾರ್ದನ ರೆಡ್ಡಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಒಟ್ಟು 124 ಆಸ್ತಿಗಳ (ಜನಾರ್ದನ ರೆಡ್ಡಿ ಅವರ ಆರು ಆಸ್ತಿಗಳು ಮತ್ತು ಲಕ್ಷ್ಮಿ ಅರುಣಾ ಹೆಸರಿನಲ್ಲಿ 118 ಆಸ್ತಿಗಳು.) ಜಪ್ತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದೀಗ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆಯಡಿಯಲ್ಲಿ ಲಕ್ಷ್ಮಿ ಅರುಣಾಗೆ ಸೇರಿದ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ. ಆದರೆ ಸಿಬಿಐ ಪಟ್ಟಿ ಮಾಡಿರುವ ಆರರಲ್ಲಿ ಒಂದು ಆಸ್ತಿ ರೆಡ್ಡಿ ಹೆಸರಿನಲ್ಲಿ ಇಲ್ಲದ ಕಾರಣ ರೆಡ್ಡಿ ಹೆಸರಿನಲ್ಲಿದ್ದ ಐದು ಆಸ್ತಿಗಳನ್ನು ಜಪ್ತಿ ಮಾಡಲು ನ್ಯಾಯಾಲಯ ಅನುಮತಿ ನೀಡಿದೆ.
ಈ ಹಿಂದೆ ಕೂಡ 2023ರ ಜನವರಿ 12 ರಂದು ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಕರ್ನಾಟಕ ಗೃಹ ಇಲಾಖೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಹೈಕೋರ್ಟ್ ಚಾಟಿ ಬೀಸಿದ ಬಳಿಕ ಎಚ್ಚೆತ್ತುಕೊಂಡಿದ್ದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಜನವರಿ 12 ರಂದು ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಪ್ರತಿಕ್ರಿಯೆಗೆ ಅನುಮತಿ ನೀಡಿತ್ತು.
ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ತೆಲಂಗಾಣ, ಆಂಧ್ರಪ್ರದೇಶದಲ್ಲಿನ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಸಿಬಿಐ ಅನುಮತಿ ಕೇಳಿತ್ತು. ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಕರ್ನಾಟಕ ಸರ್ಕಾರ ಅನುಮತಿ ನೀಡದ ಹಿನ್ನೆಲೆ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


